ಬೆಂಗಳೂರು ; ಆರೋಗ್ಯದಲ್ಲಿ ಏರುಪೇರಿನ ಹಿನ್ನೆಲೆ ಕಳೆದ ಎರಡು ಮೂರು ತಿಂಗಳಿಂದ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು ಹಾಗೂ ಕೆಮ್ಮು ಕಡಿಮೆಯಾಗದ ಕಾರಣ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿ ದೊರೆತಿದೆ.
ಹೆಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಜಿಂದಾಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅಪೋಲೋ ಆಸ್ಪತ್ರೆಯಲ್ಲಿಯೂ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ವೈದ್ಯರ ಸಲಹೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಎರಡು ವಾರಗಳ ಕಾಲ ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಅವಶ್ಯಕತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ ದಟ್ಟವಾಗಿದೆ.