Thursday, March 12, 2026
Flats for sale
Homeಸಿನಿಮಾಬೆಂಗಳೂರು : ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್​ನಿಂದ ನಿಧನ.

ಬೆಂಗಳೂರು : ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್​ನಿಂದ ನಿಧನ.

ಬೆಂಗಳೂರು : ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇನ್ನಿಲ್ಲ ಎಂಬ ಸುದ್ದಿ ಕೇಳಿ ಬಂದಿದೆ. ಇವರು ಅತ್ಯಂತ ಕಿರಿಯ ವಯಸ್ಸಿಗೆ ತಮ್ಮ ಜೀವ ಕಳೆದುಕೊಂಡಿದ್ದಾರೆ.ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಜುಲೈ 11) ರಾತ್ರಿ ನಿಧನರಾಗಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಅಪರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. ಇವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.

2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular