Sunday, September 27, 2026
Homeರಾಜಕೀಯಬೆಂಗಳೂರು : ಜೆನ್‌ಝೀಗಳೇ, ಕೋಕ್ರೋಚ್ ಗಳೇ ಎಲ್ಲಿದ್ದೀರಿ ? ಕೆಪಿಎಸ್‌ಸಿ ಅಕ್ರಮದ ಬಗ್ಗೆ ಏಕೆ ಮೌನ?:...

ಬೆಂಗಳೂರು : ಜೆನ್‌ಝೀಗಳೇ, ಕೋಕ್ರೋಚ್ ಗಳೇ ಎಲ್ಲಿದ್ದೀರಿ ? ಕೆಪಿಎಸ್‌ಸಿ ಅಕ್ರಮದ ಬಗ್ಗೆ ಏಕೆ ಮೌನ?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ..!

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ನೇಮಕಾತಿ ಅಕ್ರಮಗಳ ಕುರಿತು ಜೆನ್‌ಝೀ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಏಕೆ ಮೌನವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದವರು ಇದೀಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

“ದೆಹಲಿಯಲ್ಲಿ ಗಲಾಟೆ ಮಾಡಿದವರು ಈಗ ಎಲ್ಲಿದ್ದಾರೆ? ಕರ್ನಾಟಕದಲ್ಲಿ ನಡೆಯುತ್ತಿರುವ ಮಿತಿ ಮೀರಿದ ಭ್ರಷ್ಟಾಚಾರದ ಬಗ್ಗೆ ಏಕೆ ಪ್ರಶ್ನಿಸುತ್ತಿಲ್ಲ?” ಎಂದು ಕುಮಾರಸ್ವಾಮಿ ಕೇಳಿದರು.
ಕೆಪಿಎಸ್‌ಸಿಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳಿದ್ದು, ಪಶುವೈದ್ಯರ ನೇಮಕಾತಿಯಲ್ಲೂ ಅಕ್ರಮದ ಆರೋಪ ಕೇಳಿಬಂದಿದೆ ಎಂದು ಅವರು ಹೇಳಿದರು.

“ಕಾಸಿಗಾಗಿ ಉದ್ಯೋಗಗಳನ್ನು ಮಾರಿಕೊಳ್ಳುತ್ತಿರುವ ಭ್ರಷ್ಟಾಚಾರದ ವಿರುದ್ಧ ಏಕೆ ಧ್ವನಿ ಎತ್ತುತ್ತಿಲ್ಲ?” ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ನೇಮಕಾತಿ ಅಕ್ರಮಗಳು ಹಾಗೂ ಭ್ರಷ್ಟಾಚಾರದ ಕುರಿತು ಯುವಜನರು ಪ್ರಶ್ನಿಸಬೇಕು ಎಂದು ಅವರು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular