ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕರು ಡ್ರಗ್ ಮಾಫಿಯಾಯಕ್ಕೆ ಬಲಿಯಾಗುವುದು ಅತಿಹೆಚ್ಚಾಗಿ ಕಾಣುತ್ತಿದ್ದೇವೆ ,ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರು ಗ್ರಾ. ಜಿಲ್ಲೆಯ ಡಾಬಸ್ಪೇಟೆಯ ಕರ್ನಾಟಕ ವೇಸ್ಟೇಜ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಪ್ರದೇಶದಲ್ಲಿ ನಡೆದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ `ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪಂಜಾಬ್ನಲ್ಲಿ ಪ್ರತಿಯೊಬ್ಬ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿದ್ದಾರೆ. ಮಾದಕವಸ್ತು ಬೆರೆಸಿದ ಚಾಕೋಲೆಟ್ ಮಾರುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಬೆಳಕಿಗೆ ಬಂದಿವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಡ್ರಗ್ಸ್ ವ್ಯಸನಕ್ಕೆ ಅಂಟಿಸುವುದು ದಂಧೆಕೋರರ ಉದ್ದೇಶವಿರಬಹುದು. ಇದಕ್ಕೆ ಆಸ್ಪದ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕಲು ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದರು.
ಡ್ರಗ್ಸ್ ದಂಧೆ ವಿಶ್ವದ ಜನ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಮಾದಕ ವಸ್ತುಗಳು ಇಡೀ ಸಮಾಜವನ್ನು ನಾಶ ಮಾಡುತ್ತಿದೆ. ವಿಶೇಷವಾಗಿ ಯುವಕರ ಜೀವನ ಹಾಳು ಮಾಡುತ್ತಿವೆ. ಒಳ್ಳೆಯ ಸಮಾಜ ನಿರ್ಮಾಣ ಮಾಡುವ ಸಂದರ್ಭದಲ್ಲಿ ಬಹಳಷ್ಟು ದೊಡ್ಡ ಸವಾಲಾಗಿ ನಿಂತಿದೆ ಎಂದು ಹೇಳಿದರು.
ವಿಶ್ವಕ್ಕೆ ಸವಾಲಾಗಿರುವ ಡ್ರಗ್ಸ್ ದಂದೆಯನ್ನು ಎದುರಿಸುವಲ್ಲಿ ಕೆಲ ಸಣ್ಣ ರಾಷ್ಟçಗಳು ಸೋತು ಕೈಚೆಲ್ಲಿ ನಿಂತಿವೆ. ಹಾಲೆಂಡ್, ಸ್ವಿಟ್ಜರ್ಲೆಂಡ್ ಸೇರಿದAತೆ ಇನ್ನು ಕೆಲದೇಶಗಳು ಏನಾದರಾಗಲಿ ಎಂಬಂತೆ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವುದನ್ನು ನಿಲ್ಲಿಸಿ, ಸೋಲನ್ನು ಒಪ್ಪಿಕೊಂಡಿವೆ. ಇಂತಹ ದುಸ್ಥಿತಿ ನಮ್ಮ ದೇಶಕ್ಕೆ ಬರಬಾರದು. ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದರು.
ಪ್ರಬಲ ರಾಷ್ಟçಗಳು ಯಾವುದೇ ಕಾರಣಕ್ಕು ಡ್ರಗ್ಸ್ ಯುವಕರ ಕೈಗೆ ಸಿಗಬಾರದು ಎಂಬ ನಿಟ್ಟಿನಲ್ಲಿ ಯುದ್ಧದ ರೀತಿ ಭಾವಿಸಿ ಕ್ರಮ ಕೈಗೊಂಡಿದ್ದಾರೆ. ಅದೇ ಮಾದರಿಯಲ್ಲಿ ಡ್ರಗ್ ಮಟ್ಟ ಹಾಕಬೇಕು. ಈಗಾಗಲೇ ಮಂಡ್ಯ,ಮೈಸೂರು, ಗದಗ ಜಿಲ್ಲೆಗಳು ಡ್ರಗ್ಸ್ ದಂಧೆ ನಿಯಂತ್ರಿಸುವಲ್ಲಿ ಮುಂದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಸವಾಲಾಗಿ ಸ್ವೀಕರಿಸಿ ಜಿಲ್ಲಾ ಮಟ್ಟದಿಂದಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.


