ಬೆಂಗಳೂರು ; ಏರ್ಪೋಟ್ ರಸ್ತೆಯಲ್ಲಿಹಿಟ್ ಅಂಡ್ ರನ್ ಗೆ ಮೂವರು ವಿದ್ಯಾರ್ಥಿಗಳು ಬಲಿಯಾದ ಘಟನೆ ತಡರಾತ್ರಿ ನಡೆದಿದೆ.ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.ಮೂವರು ಯುವಕರು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿದ್ಯಾರ್ಥಿಗಳು GKVK ನಲ್ಲಿ ಬಿಎಸ್ಸಿ ವ್ಯಾಸಾಂಗ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.
ಅಪಘಾತದ ರಬಸಕ್ಕೆ ಹೆದ್ದಾರಿಯಲ್ಲಿ ಮೃತ ದೇಹಗಳು ನಜ್ಜು ಗುಜ್ಜಾಗಿದ್ದು ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.ಮೃತದೇಹಗಳು ಅಂಬೇಡ್ಕರ್ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಗ್ರಾಮ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


