Wednesday, March 11, 2026
Flats for sale
Homeರಾಜ್ಯಬೆಂಗಳೂರು ; ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಟ್ಟಹಾಸ : ಕರ್ನಾಟಕದಲ್ಲಿ 38 ಸಕ್ರಿಯ ಪ್ರಕರಣ...

ಬೆಂಗಳೂರು ; ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಟ್ಟಹಾಸ : ಕರ್ನಾಟಕದಲ್ಲಿ 38 ಸಕ್ರಿಯ ಪ್ರಕರಣ ದೃಢ,ಒಂದು ಸಾವು..!

ಬೆಂಗಳೂರು ; ದೇಶದಲ್ಲಿ ಮಹಾಮಾರಿ ಕೊರೊನಾ ಹಟ್ಟಹಾಸ ಮೆರೆದಿದ್ದು ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಐವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.

ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ.ಮಹಿಳೆ ಇತ್ತೀಚೆಗೆ ಮುಂಬೈನಿಂದ ವಾಪಸಾಗಿದ್ದು ಸದ್ಯ ಮಹಿಳೆ ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವಿಜಯನಗರ ಜಿಲ್ಲೆಯಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರು ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಳಗಾವಿ ನಗರದ ಓರ್ವ ಗರ್ಭಿಣಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಗರ್ಭಿಣಿ ನ್ಯುಮೋನಿಯಾದಿಂದ ಬಳಲುತ್ತಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬೆಳಗಾವಿ ಡಿಹೆಚ್​ಒ ಮಹಿರ್ಷಿ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಮುಂಜಾಗೃತಾ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular