Wednesday, October 22, 2025
Flats for sale
Homeಜಿಲ್ಲೆಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ ವಿಶೇಷ ತನಿಖಾ ತಂಡಕ್ಕೆ (SIT)...

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ ವಿಶೇಷ ತನಿಖಾ ತಂಡಕ್ಕೆ (SIT) ವರ್ಗಾವಣೆ..!

ಬೆಂಗಳೂರು : ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗ ರವರ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿತು.

ಈ ಬಗ್ಗೆ ರಾಜ್ಯ ಗೃಹ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದ್ದು ಪ್ರಕರಣದ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಪರಿಗಣಿಸಿ ಸಮಗ್ರ ಮತ್ತು ನಿಸ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಮನಗಂಡು ತನಿಖೆಯನ್ನು ತಕ್ಷಣ ಜಾರಿಗೆ ಬರುವಂತೆ ಎಸ್.ಐ .ಟಿ ಗೆ ವರ್ಗಾಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಇದೀಗ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿದ್ದು . ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆ ರಾಜ್ಯ ಸರಕಾರ ಪ್ರಣವ್ ಮೊಹಂತಿ, ಎಂಎನ್ ಅನುಚೇತ್, ಸೌಮ್ಯ ಲತಾ, ಜಿತೇಂದ್ರ ಕುಮಾರ್ ನೇತೃತ್ವದ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ‌ ನೇತೃತ್ವದ ತಂಡ ರಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular