Friday, March 13, 2026
Flats for sale
Homeರಾಜ್ಯಬೆಂಗಳೂರು ; ನಟಿ ಹರ್ಷಿಕಾ ದಂಪತಿ ಮೇಲೆ ಹಲ್ಲೆ,ರಾಜ್ಯದಲ್ಲಿ ತುಘಲಕ್ ಸರಕಾರದ ಆಡಳಿತ, ಮಹಿಳೆಯರಿಗೆ ರಕ್ಷಣೆ...

ಬೆಂಗಳೂರು ; ನಟಿ ಹರ್ಷಿಕಾ ದಂಪತಿ ಮೇಲೆ ಹಲ್ಲೆ,ರಾಜ್ಯದಲ್ಲಿ ತುಘಲಕ್ ಸರಕಾರದ ಆಡಳಿತ, ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದ ನಟಿ ಹರ್ಷಿಕಾ ಪೂಣಚ್ಚ.

ಬೆಂಗಳೂರು ; ನಗರದಲ್ಲಿಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತವರ ಪತಿ ನಟ ಭುವನ್ ಮೇಲೆ ಹಲ್ಲೆ ಯತ್ನ ನಡೆಸಿ ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ತೆಗೆದು ಚಿನ್ನದ ಸರ ಕದಿಯಲು ಆರೋಪಿಗಳು ಯತ್ನಿಸಿದ ಘಟನೆ ಪುಲಕೇಶಿ ನಗರದಲ್ಲಿ ಘಟನೆ ನಡೆದಿದೆ.

ಚಿನ್ನದ ಸರ ಕದಿಯಲು ಯತ್ನಿಸಿದ್ದಲ್ಲದೇ ಕನ್ನಡದಲ್ಲಿ ಮಾತನಾಡಬೇಡಿ ಎಂದು ಆರೋಪಿಗಳು ದರ್ಪ ತೋರಿದ್ದಾರೆ. ಹರ್ಷಿಕಾ ಪೂಣಚ್ಚ ಹಲ್ಲೆ ನಡೆದ ವಿಡಿಯೊವನ್ನು ಚಿತ್ರೀಕರಿಸಿ, ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿದರೂ ಏನೂ ಪ್ರಯೋಜನವಾಗಿಲ್ಲ ಎಂದು ನಟಿ ಹೇಳಿರುವುದಾಗಿ ವರದಿಯಾಗಿದು, ನಟಿ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊAಡಿದ್ದಾರೆ.

ಹರ್ಷಿಕಾ ಪೋಸ್ಟ್ನಲ್ಲಿ ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ. ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು
ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ’’. ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ’’ ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬ ದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು , ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು. ನನ್ನ ಪತಿಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ’’ ಎಂದು ಹೇಳಿದರು ಏಕೆಂದರೆ ಅವರು ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರAಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು. ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಕೋಪದ ಸ್ವಭಾವದವರು. ೨ – ೩ ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 -30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿಬ್ಬರು ನನ್ನ ಪತಿಯ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು
ಪ್ರಯತ್ನಿಸಿದರು. ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರೀಯಿಸಲಿಲ್ಲ. ಅಲ್ಲದೆ ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ನೀವು ನಮ್ಮ ಪ್ರದೇಶಕ್ಕೆ ಬಂದಿದ್ದೀರಾ, ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ, ಯೇ ಲೋಕಲ್ ಕನ್ನಡ್ ವಾಲಾ ಹೇ (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ಎನ್ನುತ್ತಿದ್ದರು. ನನ್ನ ಪತಿ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು. ಅವರಲ್ಲಿ ಹೆಚ್ಚಿನವರು ಹಿಂದಿ, ಉರ್ದು ಅಥವಾ ಇಂಗ್ಲಿಷ್ ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರು ಎಂದು ಬರೆದುಕೊAಡಿದ್ದಾರೆ.

ನಾವು ಸಮೀಪದಲ್ಲಿ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ಹತ್ತಿರದ ಪೊಲೀಸ್ ಠಾಣೆಯ ಎಎಸ್ ಐ ಉಮೇಶ್ ಅವರಿಗೆ ವಿವರಿಸಿದೆವು. ಅವರು ನಮಗೆ ಸಹಾಯ ಮಾಡಲು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವೂ ಇಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆAಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್‌ನಲ್ಲಿ ಅವರು ಕುಳಿತಿದ್ದರು’ ಎಂದು ಆರೋಪಿಸಿದ್ದಾರೆ ಹರ್ಷಿಕಾ. ಈ ಘಟನೆಯ ನಂತರ ನಾನು
ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬವು ಬೆಂಗಳೂರಿನಲ್ಲಿ ಇAತಹ ಅಗ್ನಿಪರೀಕ್ಷೆಗಳಿಗೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸ್ಯಾAಡಲ್‌ವುಡ್‌ನ ಕ್ಯೂಟ್ ಜೋಡಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಪ್ಪ ಅವರ ಮದುವೆ 2023ರ ಆಗಸ್ಟ್ 24 ರಂದು ವಿರಾಜಪೇಟೆಯಲ್ಲಿ ನಡೆದಿತ್ತು. ಪಿ.ಯು.ಸಿ ಚಿತ್ರದ ಮೂಲಕ ನಾಯಕಿಯಾಗಿ ಹೊರಹೊಮ್ಮಿದವರು ಹರ್ಷಿಕಾ. ಮೊದಲ ಬಾರಿಗೆ ಪುನೀತ್ ಅಭಿನಯದ ಜಾಕಿ ಚಿತ್ರದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿದ ಬಳಿಕ ಅವರು ಹಿಂದಿರುಗಿ ನೋಡಿಲ್ಲ

RELATED ARTICLES

LEAVE A REPLY

Please enter your comment!
Please enter your name here

Most Popular