Wednesday, March 4, 2026
Flats for sale
Homeರಾಜ್ಯಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ದೇವೇಗೌಡರ ಮೊಮ್ಮಕ್ಕಳು,ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ.

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ದೇವೇಗೌಡರ ಮೊಮ್ಮಕ್ಕಳು,ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ.

ಬೆಂಗಳೂರು : ಪಕ್ಷದ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರನ್ನು ಸೋಮವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಕಸ್ಟಡಿಗೆ ಒಪ್ಪಿಸಲಾಗಿದೆ. ಮತ್ತೊಂದೆಡೆ, ಅವರ ಸಹೋದರ, ಮಾಜಿ ಜೆಡಿಎಸ್ ಸಂಸದ ಮತ್ತು ಲೈಂಗಿಕ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಹಿಂದೆ ಸಿಐಡಿ ಕಸ್ಟಡಿಯಲ್ಲಿದ್ದರು. ಪ್ರಜ್ವಲ್ ಮತ್ತು ಸೂರಜ್ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಕ್ಕಳು.

ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ. ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡ್ನಾಪ್ ಪ್ರಕರಣದಲ್ಲಿ ಶಾಸಕ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದರು.

42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯವು ಎರಡೂ ಪ್ರಕರಣಗಳಲ್ಲಿ ಆದೇಶಗಳನ್ನು ನೀಡಿದೆ. ಜೆಡಿಎಸ್ ಪಕ್ಷದ ಪುರುಷ ಕಾರ್ಯಕರ್ತನೊಂದಿಗೆ ಬಲವಂತದ ಅಸ್ವಾಭಾವಿಕ ಲೈಂಗಿಕತೆಯ ಆರೋಪ ಹೊತ್ತಿರುವ ಸೂರಜ್ ರೇವಣ್ಣ ಅವರನ್ನು ಜುಲೈ 1 ರವರೆಗೆ ಎಂಟು ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈತನ ಪ್ರಕರಣವನ್ನು ಸರ್ಕಾರ ಭಾನುವಾರ ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಸೋಮವಾರ ಅಂತ್ಯಗೊಂಡಿದ್ದರಿಂದ ಸಿಐಡಿ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

ನ್ಯಾಯಾಲಯ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಏತನ್ಮಧ್ಯೆ, ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಈ ಪ್ರಕರಣದ ಆದೇಶವನ್ನು ಕಾಯ್ದಿರಿಸಿದೆ. ಜುಲೈ 26ರಂದು ಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

Most Popular