Friday, November 22, 2024
Flats for sale
Homeಜಿಲ್ಲೆಬೆಂಗಳೂರು : ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ : ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿ...

ಬೆಂಗಳೂರು : ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ : ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿ 64 ಮಂದಿಗೆ ಬೆಂಗಳೂರು ವಿಶೇಷ ಕೋರ್ಟ್ ನಿಂದ ಸಮನ್ಸ್.

ಬೆಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿ 64 ಮಂದಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ ಘಟನೆ ವರದಿಯಾಗಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಶಾಸಕರು ಮತ್ತಿತರಿಗೆ ಸಮನ್ಸ್ ಜಾರಿಯಾಗಿದೆ. ಬೆಳ್ತಂಗಡಿಯ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನವನ್ನು ವಿರೋಧಿಸಿ ಪೊಲೀಸ್ ಠಾಣೆಗೆ ನುಗ್ಗಿದ್ದ ಹರೀಶ್ ಪೂಂಜಾ ಮತ್ತಿತ್ತರರು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಈ ಬಗ್ಗೆ ರಾಜ್ಯಾದ್ಯಂತ ಸುದ್ದಿಯಾಗಿತ್ತು.

ಈ ಪ್ರಕರಣದಲ್ಲಿ ಮೊದಲ ಆರೋಪಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಕಾರ್ಯಕರ್ತರೊಂದಿಗೆ ತೆರಳಿ ಅಕ್ರಮ ಕ್ವಾರಿ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಶಶಿರಾಜ್ ಶೆಟ್ಟಿ ಅವರನ್ನು ಬಿಡುಗಡೆ ಮಾಡಲು ಒತ್ತಡ ಪೊಲೀಸರಿಗೆ ಮೇ.20 ರಂದು ಹಾಕಿದ್ದರು ಆದರೆ ಈ ಬಗ್ಗೆ ಪೊಲೀಸರು ಅರೆಸ್ಟ್ ಮಾಡಲು ಶಾಸಕ ಹರೀಶ್ ಪೂಂಜಾರ ಮನೆಗೆ ಸುತ್ತುವರಿದಿದ್ದರು. ಸಮನ್ಸ್ ಪ್ರಕಾರ ಜು.10 ರಂದು ಹರೀಶ್ ಪೂಂಜಾ ಮತ್ತಿತ್ತರು ಕೋರ್ಟ್ ಗೆ ಹಾಜರಾಗಬೇಕಿದೆ. ಘಟನೆಗೆ ಸಂಬಂಧ ಬೆಳ್ತಂಗಡಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೊದಲ ಪ್ರಕರಣದಲ್ಲಿ 28 ವ್ಯಕ್ತಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದ್ದರೆ, ಎರಡನೇ ಪ್ರಕರಣದ್ಲಲಿ 37 ಮಂದಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular