Thursday, March 12, 2026
Flats for sale
Homeಕ್ರೈಂಬೆಂಗಳೂರು : ಬಾತ್‌ ರೂಂನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ PUC ವಿದ್ಯಾರ್ಥಿನಿ ಮೃತದೇಹ ಪತ್ತೆ!

ಬೆಂಗಳೂರು : ಬಾತ್‌ ರೂಂನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ PUC ವಿದ್ಯಾರ್ಥಿನಿ ಮೃತದೇಹ ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದ್ದು ಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮನುಷ್ಯನ ಜೀವಕ್ಕೆ ಬೆಲೆಯಿಲ್ಲದಂತಾಗಿದೆ. ಇದೀಗ ದ್ವಿತೀಯ ವರ್ಷದ PUCವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೃತದೇಹ ಬಾತ್‌ ರೂಂನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

21 ವರ್ಷ ವಯಸ್ಸಿನ ಪ್ರಭುಧ್ಯಾ ಮೃತ ದುರ್ದೈವಿ.ಪ್ರಭುಧ್ಯಾ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ. ತಾಯಿ ಹೊರಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.

ಪ್ರಭುಧ್ಯಾಳ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ, ಕೊಲೆಯೋ ಹೀಗೆ ಎಲ್ಲ‌ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತಳ ತಮ್ಮ ಮನೆಗೆ ಬಂದು ನೋಡಿದಾಗ ಸಹೋದರಿ ಪ್ರಭುಧ್ಯಾ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರಿಂದ ಕೇಸ್ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular