ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್ಪುರಂ ಶಾಸಕ ಬೈರತಿ ಬಸವರಾಜ್ ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಪೊಲೀಸರಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವುದರಿಂದ ಬೈರತಿ ಬಸವರಾಜ್ಗೆ ಮತ್ತೆ ಸಂಕಷ್ಟ ಶುರುವಾಗಿದೆ.
ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ 5 ನೇ ಆರೋಪಿಯಾಗಿರುವ ಬೈರತಿ ಬಸವರಾಜ್ 6 ತಿಂಗಳ ಬಳಿಕ ಬಂಧನಕ್ಕೆ ಒಳಗಾಗಿದ್ದರು. ಬಂಧಿಸಿದ್ದರು. ಆಗ 7 ದಿನ ಸಿಐಡಿ ಕಸ್ಟಡಿಗೆ ನೀಡಿ 42ನೇ ಎಸಿಎಂಎA ಕೋರ್ಟ್ ಆದೇಶ ಹೊರಡಿಸಿತ್ತು. 7 ದಿನಗಳ ಕಾಲ ಸಿಐಡಿ ಅಧಿಕಾರಿಗಳು 258 ಪ್ರಶ್ನೆಗಳನ್ನು ಮಾಡಿದ್ದರು. ಈ ವೇಳೆ ಬಹುತೇಕ ಪ್ರಶ್ನೆಗಳಿಗೆ ಶಾಸಕರು ಗೊತ್ತಿಲ್ಲ ಎಂದು ಉತ್ತರವನ್ನೇ ನೀಡಿದ್ದರು. ಇದರ ಜೊತೆಗೆ ಶಾಸಕರ ಎರಡು ಮೊಬೈಲ್ಗಳು ಕೂಡ ಸಿಐಡಿ ಜಪ್ತಿ ಮಾಡಿತ್ತು. ಮಾ.13ರಂದು ಷರತ್ತುಬದ್ಧ ಜಾಮೀನು ಮಂಜೂರು ಬೆನ್ನಲ್ಲೇ ಸೆಂಟ್ರಲ್ ಜೈಲಿನಿಂದ ಶಾಸಕ ಬೈರತಿ ಬಸವರಾಜ್ ಬಿಡುಗಡೆ ಆಗಿದ್ದರು. ಬೈರತಿ ಬಸವರಾಜ್ ಅವರಿಗೆ ಜಾಮೀನು ಮಂಜೂರು ಮಾಡಿರುವುದನ್ನು ರದ್ದು ಮಾಡುವಂತೆ ಕೋರಿ ಸಿಐಡಿ ಪೊಲೀಸರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.


