ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿದ್ದಾರೆ.ಇದೀಗ ಬೆಂಗಳೂರು ಉತ್ತರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗಿದೆ.ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದು,ಪಕ್ಷದ ಈ ನಿರ್ಧಾರದಿಂದ ಡಿವಿ ಸದಾನಂದಗೌಡ ಅವರು ಬೇಸರಗೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸುತ್ತಿದ್ದು, ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿಜೆಪಿ ಡಿ ವಿ ಸಂದಾನಂದ ಗೌಡರಿಗೆ ಎಲ್ಲ ರೀತಿಯ ಉದ್ಧೆಯನ್ನು ನೀಡಿದ್ದರು ಅತಿಆಶೆಯಿಂದ ಬಿಜೆಪಿ ತೊರೆಯುವ ನಿರ್ಧಾರ ತೆಗೆದಿರಬಹುದೆಂದು ಕ್ಷೆತ್ರದ ಸಾಮಾನ್ಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.ಮುಂದಿನ ರಾಜಕೀಯ ನಡೆಯ ಬಗ್ಗೆ ಮಂಗಳವಾರ ಬೆಳಗ್ಗೆ 10.30ಕ್ಕೆ ಮಾಧ್ಯಮ ಗೋಷ್ಠಿ ಮೂಲಕ ತಿಳಿಸುವುದಾಗಿ ಹೇಳಿ ಸಸ್ಪೆನ್ಸ್ ಸೃಷ್ಟಿ ಮಾಡಿದ್ದಾರೆ.ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ. ಬೇರೆ ಬೇರೆ ಸಂಗತಿಗಳು ನಡೀತಿವೆ ಎಂದು ಹೇಳಿದ್ದಾರೆ.
ಅಪ್ಪ ಮಕ್ಕಳಿಂದ ನನಗೆ ಟಿಕೆಟ್ ತಪ್ಪಿದೆ ಎಂದು ಬೇಸರ ವ್ಯಕ್ತಪಡಿಸಿದ ಡಿ ವಿ ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ ತಿಳಿದು ತಿಳಿದು ಹೀಗೆ ಮಾಡಿರುವುದು ಬೇಜಾರು ತಂದಿದೆ. ಬಿ.ವೈ.ರಾಘವೇಂದ್ರ ವಿರುದ್ಧ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವ ಕುರಿತು ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿಯಾಗಿ ಮಾತನಾಡಿದ್ದೇನೆ. ಪಕ್ಷದಲ್ಲಿ ಯಾರಿಗೆಲ್ಲ ಮನಸ್ಸಿಗೆ ನೋವಾಗಿದೆ ಅವರೆಲ್ಲರೂ ಒಟ್ಟು ಸೇರಿ ವರಿಷ್ಠರ ಬಳಿ ತಮ್ಮ ನಿರ್ಧಾರದ ಬಗ್ಗೆ ಹೇಳಿಕೊಳ್ಳಬೇಕೆಂದು ತೀರ್ಮಾನಿಸಿದ್ದರು.ಆದರೆ ಈಶ್ವರಪ್ಪ ತಮ್ಮದೇ ಆದ ನಿರ್ಣಯ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದರು.
ಮಾರ್ಚ್ 18 ಡಿ.ವಿ. ಸದಾನಂದ ಗೌಡ ಅವರ 71ನೇ ಹುಟ್ಟುಹಬ್ಬ. ಈ ನಿಟ್ಟಿನಲ್ಲಿ ಅವರ ಅಭಿಮಾನಿಗಳು ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದರಲ್ಲಿ ಭಾಗವಹಿಸಿದ ಬಳಿಕ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂಬ ಮಾತು ಕೇಳಿ ಬರುತ್ತಿದೆ.


