Monday, February 23, 2026
Flats for sale
Homeರಾಜ್ಯಬೆಂಗಳೂರು : ಬೆಂಗಳೂರಿ ನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ.

ಬೆಂಗಳೂರು : ಬೆಂಗಳೂರಿ ನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ.

ಬೆಂಗಳೂರು : ರಾಜಧಾನಿಯಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ, ಜಾಮೀನು ಪಡೆದು ನಾಪತ್ತೆಯಾಗಿದ್ದ ಶಂಕಿತ ಉಗ್ರ ಅರ್ಷಾದ್ ಖಾನ್‌ನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಹಲವು ದಿನಗಳ ಹಿಂದೆ ಬೆಂಗಳೂರಿ ನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಹಾಗೂ ಅಕ್ರಮವಾಗಿ ಗ್ರೆನೇಡ್‌ಗಳನ್ನು ಹೊಂದಿದ್ದ ಗಂಭೀರ ಆರೋ ಪದ ಮೇಲೆ ಈತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಪ್ರಕರಣದ ಗಾಂಭೀರ್ಯತೆ ಮತ್ತು ಅಂತಾ ರಾಷ್ಟಿçÃಯ ನಂಟುಗಳ ಶಂಕೆಯ ಹಿನ್ನೆಲೆ, ತನಿಖೆಯನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು.

ಗ್ರಾನೈಡ್ ಪ್ರಕರಣದಲ್ಲಿ ಜೈಲು ಸೇರಿದ್ದ ಅರ್ಷಾದ್ ಖಾನ್, ಕೆಲವು ತಿಂಗಳ ಹಿಂದೆ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿದ್ದ. ಆದರೆ, ಜಾಮೀನಿನ ನಿಯಮಗಳನ್ನು ಉಲ್ಲಂಘಿಸಿದ ಈತ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸತತವಾಗಿ ಗೈರಾಗುವ ಮೂಲಕ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯವು ಆತನ ವಿರುದ್ಧ ವಾರೆಂಟ್ ಹಾಗೂ ಘೋಷಿತ ಅಪರಾಧಿ ಎಂದು ಆದೇಶವನ್ನು ಹೊರಡಿಸಿತ್ತು. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಕಾರ್ಯ ಪ್ರವೃತ್ತರಾದ ಎನ್‌ಐಎ ಅಧಿಕಾರಿಗಳು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅರ್ಷಾದ್ ಖಾನ್‌ನನ್ನು ಸೆರೆಹಿಡಿದಿದ್ದಾರೆ.

ಬಂಧಿತನನ್ನು ಇಂದು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬAಧನಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಈತ ಯಾರ ಆಶ್ರಯದಲ್ಲಿದ್ದ? ವಿದೇಶಿ ಅಥವಾ ಸ್ಥಳೀಯ ಉಗ್ರ ಸಂಘಟನೆಗಳೊAದಿಗೆ ಸಂಪರ್ಕ ಹೊಂದಿದ್ದನೇ? ಮತ್ತು ಮತ್ತೆ ಯಾವುದಾದರೂ ಸ್ಫೋಟಕ್ಕೆ ಸಂಚು ರೂಪಿಸಿದ್ದನೇ? ಎಂಬ ಆಯಾಮಗಳಲ್ಲಿ ಅಧಿಕಾರಿಗಳು ಈಗ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಹಿಂದೆಯೂ ಜೈಲಿನಲ್ಲಿ ಇದ್ದ, ಬೇಲ್ ಮೇಲೆ ಹೊರಬಂದಿದ

ಗ್ರೆನೇಡ್ ಪ್ರಕರಣದಲ್ಲಿ ಜೈಲು ಸೇರಿದ್ದ ಅರ್ಷಾದ್ ಖಾನ್, ಕೆಲವು ತಿಂಗಳ ಹಿಂದೆ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿದ್ದ. ಆದರೆ, ಜಾಮೀನಿನ ನಿಯಮಗಳನ್ನು ಉಲ್ಲಂಘಿಸಿದ ಈತ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸತತವಾಗಿ ಗೈರಾಗುವ ಮೂಲಕ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯವು ಆತನ ವಿರುದ್ಧ ವಾರೆಂಟ್ ಹಾಗೂ ಘೋಷಿತ ಅಪರಾಧಿ ಎಂದು ಆದೇಶವನ್ನು ಹೊರಡಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular