Wednesday, November 5, 2025
Flats for sale
Homeಕ್ರೈಂಬೆಂಗಳೂರು : ಬೆಳ್ಳಂದೂರಿನ ಶಾಲೆಯೊಂದರ ಆವರಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ,ಹೆಚ್ಚಿದ ಆತಂಕ.

ಬೆಂಗಳೂರು : ಬೆಳ್ಳಂದೂರಿನ ಶಾಲೆಯೊಂದರ ಆವರಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ,ಹೆಚ್ಚಿದ ಆತಂಕ.

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ನಡೆದು ಇನ್ನೇನು ಕೆಲವೇ ದಿನಗಳು ನಡೆದಿದ್ದು ಇದೀಗ ಮತ್ತೊಮ್ಮೆ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

ಬೆಂಗಳೂರಿನ ಹಲವು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿತ್ತು. ನಂತರ ಅದು ನಕಲಿ ಬೆದರಿಕೆ ಎಂಬುದು ತಿಳಿದು ಬಂದಿದ್ದರೂ, ಬೆದರಿಕೆ ಸಂದೇಶದ ಹಿಂದೆ ವಿದೇಶಿ ಉಗ್ರ ಸಂಘಟನೆಗಳ ಕೈವಾಡ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ.ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು ಎಂದು ತಿಳಿದುಬಂದಿದೆ. ಸದ್ಯ ಜಿಲೆಟಿನ್ ಹಾಗೂ ಬ್ಲಾಸ್ಟ್ ಮಾಡಲು ಇಟ್ಟಿದ್ದ ವಸ್ತುಗಳು ಪೊಲೀಸರ ಕೈಗೆ ಸಿಕ್ಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular