Friday, November 22, 2024
Flats for sale
Homeರಾಜಕೀಯಬೆಂಗಳೂರು : ಭೂವ್ಯವಹಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ಚಂದ್ರಶೇಖರ್ ಎಂದ ಕುಮಾರಸ್ವಾಮಿ,...

ಬೆಂಗಳೂರು : ಭೂವ್ಯವಹಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ಚಂದ್ರಶೇಖರ್ ಎಂದ ಕುಮಾರಸ್ವಾಮಿ, ಕೇಂದ್ರ ಸಚಿವರನ್ನು ಹಂದಿಗೆ ಹೋಲಿಸಿದ ಲೋಕಾಯುಕ್ತ ಎಡಿಜಿಪಿ..!

ಬೆಂಗಳೂರು : ಮುಡಾ ಹಗರಣದ ಬಳಿಕ ರಾಜ್ಯ ರಾಜಕಾರಣದಲ್ಲಿ ಸೇಡಿನ ರಾಜಕಾರಣ ಶುರುವಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೇಂದ್ರ ಸಚಿವ ಕುಮಾರಸ್ವಾಮಿಗೂ ಲೋಕಾ ಕಂಟಕ ಎದುರಾಗಿದೆ. ಗಂಗೇನಹಳ್ಳಿ ಡಿ-ನೋಟಿಪಿಕೇಷನ್ ಪ್ರಕರಣ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ರು. ಇದರ ಬೆನ್ನಲ್ಲೇ ಕೆರಳಿದ ಕೇಂದ್ರ ಸಚಿವ ಕುಮಾರಸ್ವಾಮಿ, ನಿನ್ನೆ ಸುದ್ದಿಗೋಷ್ಠಿ ನಡೆಸಿ, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದರು. ಬೆನ್ನಲ್ಲೇ ತಮ್ಮ ಇಲಾಖೆಯ ಸಿಬ್ಬಂದಿಗೆ ಪತ್ರ ಬರೆಯುವ ಮೂಲಕ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿಗೆ ಭರ್ಜರಿ ಟಾಂಗ್​ ನೀಡಿದ್ದಾರೆ.

ಲೋಕಾಯುಕ್ತ ಎಸ್​ಐಟಿ ಎಡಿಜಿಪಿ, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಪತ್ರದ ಮೂಲಕ ಹಂದಿಗೆ ಹೋಲಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್​, ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಅಲ್ಲದೇ ಸ್ವತಃ ಕುಮಾರಸ್ಬಾಮಿ ತಿರುಗೇಟು ನೀಡಿದ್ದಾರೆ. ಅಲ್ಲದೇ ಜೆಡಿಎಸ್ ಘಟಕ ಸಹ ಚಂದ್ರಶೇಖರ್ ವಿರುದ್ಧ ಹೊಸ ಗಂಭೀರ ಆರೋಪವನ್ನು ಮಾಡಿದೆ.

ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಆದರೆ ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ. ಅಪರಾಧಿಗಳನ್ನು, ಆರೋಪಿಗಳನ್ನು ಎದುರಿಸುವುದನ್ನು ನಾವು ತಪ್ಪಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ನಾವು ಎದುರಿಸುವ ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಭರವಸೆಯನ್ನು ಕಳೆದುಕೊಳ್ಳಬೇಡಿ. ಯಾವಾಗಲೂ ಸತ್ಯಕ್ಕೆ ಜಯ ಸಿಗುತ್ತೆ. ಸತ್ಯ, ದೇವರು ಮತ್ತು ನಮ್ಮ ಕಾನೂನಿನಲ್ಲಿ ನಂಬಿಕೆ ಇರಲಿ. ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಎಡಿಜಿಪಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇನ್ನು ಕುಮಾರಸ್ವಾಮಿಯನ್ನು ಹಂದಿಗೆ ಹೋಲಿಕೆ ಮಾಡಿದ್ದಕ್ಕೆ ಐಪಿಎಸ್​ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್​ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ಕಳ್ಳನ ಮನಸ್ಸು ಹುಳ್ಳಳ್ಳಗೆ . ಎಂ.ಚಂದ್ರಶೇಖರ್​ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ. ಕಾನೂನಿನಡಿಯಲ್ಲಿ ನೀವು ಉತ್ತರ ನೀಡಬಹುದಿತ್ತು. ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಹತಾಶೆ. ಸಿಟ್ಟು, ಆಕ್ರೋಶದಿಂದ ಕೀಳುಮಟ್ಟದ ಪದಗಳನ್ನು ಬಳಸಿ ಉತ್ತರಿಸಿದ್ದೀರಿ. ನಿಮ್ಮ ಭ್ರಷ್ಟಾಚಾರ ದಾಖಲೆ ಸಮೇತ ಬಯಲು ಮಾಡಿದ್ದು ಅಪರಾಧವೇ? ಎಂದು ಪ್ರಶ್ನಿಸಿದೆ.

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿಯಾಗಿರುವ ಎಂ.ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ. ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು. ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ. ಹಲವು ಅಪರಾಧ ಮಾಡಿರುವ ಇಂತಹ ಕಳಂಕಿತ ಅಧಿಕಾರಿಗಳಿಂದ ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ತನಿಖೆ ಅಸಾಧ್ಯ. ಕೀಳುಮಟ್ಟದ ಪದ ಬಳಸಿರುವ ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರೇ ಅವರ ವಿರುದ್ಧ ಕ್ರಮ ಕೈಗೊಳ್ಳಿ. ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆಯೂ ಸರ್ಕಾರ ತನಿಖೆ ನಡೆಸಬೇಕು/ ಕೇಂದ್ರ ಗೃಹ ಸಚಿವಾಲಯ ಈ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಟ್ವೀಟ್ ಮೂಲಕ ಜೆಡಿಎಸ್​ ಘಟಕ ಆಗ್ರಹಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular