Thursday, July 23, 2026
Homeರಾಜಕೀಯಬೆಂಗಳೂರು ; ಮರಳಿ ಗೂಡಿಗೆ ಬಂದ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ.

ಬೆಂಗಳೂರು ; ಮರಳಿ ಗೂಡಿಗೆ ಬಂದ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ.

ಬೆಂಗಳೂರು: ಗಣಿ ಧಣಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ಮತ್ತೆ ಕಮಲವನ್ನು ಅಪ್ಪಿಕೊಂಡಿದ್ದಾರೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ಸೇರ್ಪಡೆಗೊಂಡರು.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಗಂಗಾವತಿ ಶಾಸಕ, ಕಳೆದ ವರ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ (ಕೆಆರ್‌ಪಿಪಿ) ಸ್ಥಾಪಿಸಿ ಬಿಜೆಪಿಯೊಂದಿಗಿನ ಎರಡು ದಶಕಗಳ ಹಿಂದಿನ ಒಡನಾಟವನ್ನು ಮುರಿದುಕೊಂಡಿದ್ದರು.ಇದೀಗ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರು 2024 ರ ಲೋಕಸಭೆ ಚುನಾವಣೆಗೆ ಮುನ್ನ ಸೋಮವಾರ ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದಾರೆ.

ರೆಡ್ಡಿ ಅವರು ಇಂದು ತಮ್ಮ ಕೆಆರ್‌ಪಿಪಿಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದು, ಪತ್ನಿ ಅರುಣಾ ಲಕ್ಷ್ಮಿ ಮತ್ತು ಕೆಲವು ಕುಟುಂಬ ಸದಸ್ಯರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಇತರರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

RELATED ARTICLES

LEAVE A REPLY

Please enter your comment!
Please enter your name here

Most Popular