Friday, March 13, 2026
Flats for sale
Homeರಾಜ್ಯಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್​...

ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್​ ವಶಕ್ಕೆ!

ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧಿಸಿದಂತೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಉಲ್ಟಾ ಹೊಡೆದಿದ್ದು ಹಿರಿಯೂರು ಠಾಣೆ ಪೊಲೀಸರು ಬಿಜೆಪಿ ಮುಖಂಡ ದೇವರಾಜೇಗೌಡರವರನ್ನು ಬಂಧಿಸಿದ್ದಾರೆ.

ಹೊಳೆನರಸೀಪುರದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಮೇಲೆ ಕೇಸ್​ ಒಂದು ದಾಖಲಾಗಿತ್ತು. ಅದೇ ಮಹಿಳೆ ವಿರುದ್ಧ ಹೆಬ್ಬಾಳದಲ್ಲಿ ದೇವರಾಜೇಗೌಡ ಕೂಡ ದೂರು ದಾಖಲಿಸಿದ್ದರು. ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದು ವಕೀಲ ದೇವರಾಜೇಗೌಡ ವಾಟ್ಸಪ್ ಕಾಲ್ ಮುಖಂತರ ಕಿರುಕುಲನೀಡುತಿದ್ದರೆಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ. ಹೀಗಾಗಿ ಮಹಿಳೆ‌ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐಆರ್​ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular