Saturday, March 14, 2026
Flats for sale
Homeರಾಜಕೀಯಬೆಂಗಳೂರು ; ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಂಧನ ಭೀತಿ,ಜಾಮೀನು ರಹಿತ ಅರೆಸ್ಟ್ ವಾರೆಂಟ್​ ಜಾರಿ.

ಬೆಂಗಳೂರು ; ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಂಧನ ಭೀತಿ,ಜಾಮೀನು ರಹಿತ ಅರೆಸ್ಟ್ ವಾರೆಂಟ್​ ಜಾರಿ.

ಬೆಂಗಳೂರು ; ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ವಾರಂಟ್​ ಜಾರಿ ಮಾಡಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು.ಆದರೆ ಇದೀಗ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಗಂಭೀರ ಸ್ವರೂಪ ಪಡೆದಿದೆ. ಈ ಪ್ರಕರಣ ಸಂಬಂಧ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನಿಂದ NBW ಜಾರಿಯಾಗಿದೆ. ಬಿಎಸ್‌ವೈ ಅವರ ಬಂಧನಕ್ಕಾಗಿ ವಾರಂಟ್ ನೀಡುವಂತೆ ಸಿಐಡಿ ಕೋರಿತ್ತು. ಇದೀಗ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬಂಧನಕ್ಕಾಗಿ ಸಿಐಡಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮಹಿಳೆಯ ದೂರಿಗೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪಗೆ ನೋಟಿಸ್ ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನಲೆ ಬಿಎಸ್ ವೈ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್​ಗೂ ಉತ್ತರ ನೀಡಿರುವ ಬಿಎಸ್‌ವೈ ಸೋಮವಾರ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular