ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಅಕ್ಟೋಬರ್-ನವೆಂಬರ್ ಕ್ರಾಂತಿ ಹೇಳಿಕೆಗಳ ಮಧ್ಯೆಯೇ ಈಗ ಸಿಎಂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಅಹಿಂದ ಅಸ್ತ್ರ ಬಿಡಲು ಮುಂದಾಗುತ್ತಿದ್ದಾರಾ ಎಂಬ ವ್ಯಾಖ್ಯಾನ ರಾಜಕೀಯ ವಲಯದಲ್ಲಿ ಶುರುವಾಗಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. 2 ದಿನಗಳ ಹಿಂದೆ ಸಿಎಂ ಪುತ್ರ ಡಾ. ಯತೀಂದ್ರ ಅವರು ನೀಡಿದ್ದ, `ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಲು ಸೂಕ್ತ ಅಭ್ಯರ್ಥಿ’ ಎಂಬ ಹೇಳಿಕೆ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಮೊದಲಿನಿAದಲೂ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಸತೀಶ ಜಾರಕಿಹೊಳಿ, ಅಹಿಂದ ಏಳ್ಗೆಯಲ್ಲಿ ಮೊದಲಿನಿಂದಲೂ ಶ್ರಮಿಸಿದ್ದಾರೆ. ೨೦೨೮ಕ್ಕೆ ನನ್ನ ಸರದಿ ಬರುತ್ತದೆ ಎಂದು ಸತೀಶಜಾರಕಿಹೊಳಿ ಅವರು ಹಲವು ಬಾರಿ ಹೇಳಿದ್ದಾರೆ. ಅದಕ್ಕೆ ಪೂರಕ ಎಂಬAತೆ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸತೀಶ ಜಾರಕಿಹೊಳಿ ಅವರ ಹೆಸರು ಮುಂಚೂಣಿಯಲ್ಲಿ ಹರಿದಾಡುವಂತೆ ಮಾಡುತ್ತಿದ್ದಾರಾ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ನಡೆದಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಗಳು ಆಗಾಗ ಬಂದು ಹೋಗುತ್ತಿದ್ದರೂ ಈ ಅದು ಬಾರಿ ಬಹುತೇಕ ಖಚಿತವಾಗಿದೆ ಎಂಬ ಅನುಮಾನ ಹೆಚ್ಚಾಗಿದೆ. ಎರಡೂವರೆ ವರ್ಷದ ನಂತರ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿ ಎAದು ಮೊದಲಿನಿಂದಲೂ ಹೇಳುತ್ತ ಬರುತ್ತಿರುವ ಅವರ ಬೆಂಬಲಿಗರಿಗೆ ಯತೀಂದ್ರ ಅವರ ಈ ಹೇಳಿಕೆ ತಳಮಳ ಸೃಷ್ಟಿಸಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಉಮೇದಿನಲ್ಲಿ ನಿರಂತರ ಪ್ರಯತ್ನ ನಡೆಸುತ್ತಲೇ ಬಂದಿದ್ದಾರೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದರು. ಹೈಕಮಾಂಡ್ ಮಟ್ಟದಲ್ಲಿಯೇ ಎಲ್ಲವೂ ನಿರ್ಧಾರವಾಗಿದ್ದು ಇದೀಗ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂದು ಡಿಕೆಶಿ ಅವರ ಬೆಂಬಲಿಗರು ಹೇಳುತ್ತಲೇ ಬರುತ್ತಿದ್ದಾರೆ.
ಕಾಂಗ್ರೆಸ್ನ ಈ ಎಲ್ಲವನ್ನೂ ಅಸ್ತçವಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಇದೀಗ ಯತೀಂದ್ರ ಅವರ ಹೇಳಿಕೆಯನ್ನೂ ಸಹ ಬಳಸಿಕೊಳ್ಳುತ್ತಿದೆ. ತನ್ನ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಿದ್ದರಾಮಯ್ಯ ಪದತ್ಯಾಗಕ್ಕೆ ದಿನಗಣನೆ ಆರಂಭ. ನಮ್ಮ ಅಪ್ಪ ರಾಜಕೀಯ ಜೀವನದ ಕೊನೆಗಾಲದಲ್ಲಿ ಇದ್ದಾರೆ ಎನ್ನುತ್ತಾ, ಮುಂದಿನ ಉತ್ತರಾಧಿಕಾರಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಪುತ್ರ. ರಾಜಕೀಯ ಜೀವನದ ಕೊನೆಗಾಲದಲ್ಲೂ ಡಿಕೆಶಿಗೆ ಚೆಕ್ಮೇಟ್ ನೀಡಲು ಮುಂದಾದ ಸಿದ್ದು ಟೀಮ್ ಎಂದು ಹೇಳಿದೆ. ಟ್ವೀಟ್ ನಲ್ಲಿ ಯತೀಂದ್ರ ಅವರು ಹೇಳಿಕೆ ನೀಡಿರುವ ವಿಡಿಯೋವನ್ನು ಪೋಸ್ಟ್ ಮಾಡಿದೆ.
ಕೆಲವು ದಿನಗಳ ಹಿಂದಿನಿAದ ತಿಂಗಳು ಕ್ರಾಂತಿಗಳ ಬಗ್ಗೆ ವಿರೋಧ ಪಕ್ಷಗಳು ಪದೇ ಪದೇ ಧ್ವನಿ ಮಾಡುತ್ತಲೇ ಇದ್ದು, ಕ್ರಾಂತಿ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ನಡೆಯುತ್ತವೆ. ಆದರೆ ಕಾಂಗ್ರೆಸ್ ವರಿಷ್ಠರು ಮಾತ್ರ ಯಾವುದೇ ಸ್ಪಷ್ಟನೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ. ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆಯೋ ಅಥವಾ ಬದಲಾಗುತ್ತಾರೆಯೋ ಎಂದು ಯಾವುದೇ ಸ್ಪಷ್ಟನೆ ನೀಡಿಲ್ಲ ಇದರಿಂದಾಗಿ ದಿನಕ್ಕೊಂದು ಹೇಳಿಕೆಗಳು ಉದ್ಭವವಾಗುತ್ತಿವೆ. ಪ್ರತಿಬಾರಿ ಚರ್ಚೆ ನಡೆದಾಗಲು ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಹೈಕಮಾಂಡ್ ಸಮರ್ಥವಾಗಿದೆ. ಈ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬಾರದು ಎಂದು ತಾಕೀತು ಮಾಡಲಾಗುತ್ತಿದೆ. ಈ ಅವಧಿಗೆ ನಾನೇ ಮುಖ್ಯಮಂತ್ರಿ ಎAದು ಸಿದ್ದರಾಮಯ್ಯ ಹಲವಾರು ಬಾರಿ ಸ್ಪಷ್ಟನೆ ನೀಡಿದ್ದಾರೆ.


