Sunday, May 10, 2026
Flats for sale
Homeರಾಜ್ಯಬೆಂಗಳೂರು : ಮೇ 18ರಿಂದ 25ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2 .

ಬೆಂಗಳೂರು : ಮೇ 18ರಿಂದ 25ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2 .

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಅನ್ನು ಮೇ 18ರಿಂದ 25ರವರೆಗೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಪರೀಕ್ಷೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಮಂಡಳಿ ಮಾಹಿತಿ ನೀಡಿದೆ.

ಈ ಬಾರಿ ಪರೀಕ್ಷೆಗೆ ಒಟ್ಟು 1,14,444 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ರಾಜ್ಯದಾದ್ಯಂತ 358 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಳೆದ ವರ್ಷಗಳಂತೆ ಈ ಬಾರಿಯೂ ಪರೀಕ್ಷೆಯನ್ನು ಪಾರದರ್ಶಕ ಹಾಗೂ ವ್ಯವಸ್ಥಿತ ರೀತಿಯಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರೀಕ್ಷೆಗೂ ಮುನ್ನ ಹಾಗೂ ಪರೀಕ್ಷೆ ನಡೆಯುವ ವೇಳೆ ಸುಳ್ಳು ವದಂತಿಗಳು ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಕೋಚಿಂಗ್ ಮತ್ತು ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್/ಸೈಬರ್ ಸೆಂಟರ್‌ಗಳು, ಜೆರಾಕ್ಸ್ ಅಂಗಡಿಗಳ ಮೂಲಕ ತಪ್ಪು ಮಾಹಿತಿ ಹರಡದಂತೆ ನಿಗಾ ವಹಿಸಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ವೇಳೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಅಕ್ರಮಗಳಿಗೆ ಪ್ರಚೋದನೆ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular