ಬೆಂಗಳೂರು : ಸುಲಭವಾಗಿ ಹಣ ಸಂಪಾದನೆ ಮಾಡುವ ಹಿನ್ನೆಲೆ ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಪ್ರಜ್ಞೆ ತಪ್ಪಿಸಿ ಮಂಗಳಮುಖಿಯರು ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ ಘಟನೆ ಬೆಂಗಳೂರಿನ ಪುಲಿಕೇಶಿನಗರ ಠಾಣಾ ವ್ಯಾಪ್ತಿಯ ಫ್ರೆಜರ್ ಟೌನ್ ನಲ್ಲಿ ನಡೆದಿದೆ. ಅಂಬೇಡ್ಕರ್ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದು ಮೂರು ವರ್ಷಗಳ ಹಿಂದೆಚಿತ್ರ, ಅಶ್ವಿನಿ, ಕಾಜಲ್, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ ನೆಪದಲ್ಲಿ ಬಂದು ಯುವಕನನ್ನು ಪರಿಚಯ ಮಾಡಿಕೊಂಡಿದ್ದರು.
18 ವರ್ಷದ ಯುವಕನನ್ನ ಐವರು ಮಂಗಳ ಮುಖಿಯರು ಮನಃಪರಿವರ್ತಿಸಲು ಪ್ರಯತ್ನಿಸಿದ್ದು ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದರು . ಆದರೆ ಯುವಕ ಇದಕ್ಕೆ ಒಪ್ಪದೆ ಇದ್ದಾಗ, ಬಲವಂತವಾಗಿ ಬೆದರಿಸಿ ಟ್ಯಾನರಿ ರಸ್ತೆಯಲ್ಲಿದ್ದ ಮನೆಯಲ್ಲಿ ಯುವಕನನ್ನು ಇರಿಸಿಕೊಂಡಿದ್ದಾರೆ. ಬಳಿಕ ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್ಮೇಲ್ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.
ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಒಪ್ಪದೆ ಇದ್ದಾಗ ಗಾಂಜಾ ಸೇವಿಸಿ, ಮದ್ಯಪಾನ ಮಾಡಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ. ಬಳಿಕ ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಬಲವಂತವಾಗಿ ಹುಡುಗನೊಬ್ಬನಿಗೆ ಲಿಂಗ ಪರಿವರ್ತನೆ ಮಾಡಿಸಿರುವ ಆರೋಪ ಕೇಳಿ ಬಂದಿದೆ.ಕಳೆದ ಆಗಸ್ಟ್ 3 ರವರೆಗೆ ಮನೆಯಲ್ಲಿಯೇ ಕೂಡಿ ಹಾಕಿ, ಮನೆ ಮೇಲೆ ಕರೆದುಕೊಂಡು ಹೋಗಿ ಯಾವುದೋ ಪೂಜೆ ಮಾಡಿಸಿದ್ದಾರೆ. ನಂತರ ಹೇಗೋ ಇವರಿಂದ ತಪ್ಪಿಸಿಕೊಂಡ ಸಂತ್ರಸ್ತ ಪೊಲೀಸರಿಗೆ ದೂರು ನೀಡಿದ್ದಾನೆ.
ಸದ್ಯ ಘಟನೆ ಸಂಬಂಧ ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಮಂಗಳಮುಖಿಯರಾದ ಚಿತ್ರಾ, ಪ್ರೀತಿ, ಕಾಜಲ್, ಅಶ್ವಿನಿ, ಮುಗಿಲಿ ಎಂಬ ಐವರ ವಿರುದ್ಧ ಸಂತ್ರಸ್ಥ ದೂರು ನೀಡಿದ್ದಾನೆ. ಅಲ್ಲದೇ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಕೂಡ ಮಾಡ್ತಿದ್ದಾರೆ ಎನ್ನುವ ಆರೋಪ ಸಹ ಮಾಡಿದ್ದಾನೆ. ಕೇಸ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸ್ತಿದ್ದಾರೆ.


