ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ನೂರಾರು ಕೋಟಿ ರೂ. ಅವ್ಯವಹಾರ ನಡೆದಿದ್ದು, ಸಚಿವ ಆರ್.ಬಿ. ತಿಮ್ಮಾಪುರ್ ಭ್ರಷ್ಟಾಚಾರದ ಮೂಲಪುರುಷ ಎಂದು ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಗುರುಸ್ವಾಮಿ ಆರೋಪಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕೇವಲ 18-20 ಕೋಟಿ ಅವ್ಯವಹಾರ ನಡೆದಿಲ್ಲ. ಇಲ್ಲಿ ನೂರಾರು ಕೋಟಿ ರೂ. ಮೌಲ್ಯದ ಅವ್ಯವಹಾರ ನಡೆದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಈ ಹಿನ್ನೆಲೆ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ತಿಳಿಸಿದೆ.
ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧವೂ ದೂರು ದಾಖಲಿಸಿದೆ. ತಿಮ್ಮಾಪುರ ಅವರ ಖಾತೆ ಬದಲಾವಣೆ ಮಾಡುವಂತೆ ಸಿಎಂಗೆ ಒತ್ತಾಯಿಸಿದ್ದಾರೆ. ಭ್ರಷ್ಟಾಚಾರದ ಬಗ್ಗೆ ದೂರು ನೀಡಿ ಕೆಲ ತಿಂಗಳ ಹಿಂದೆ ಸಿಎಂ, ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಸಂಘ ಇದೀಗ ಮತ್ತೆ ಉದ್ಯಮಗಳನ್ನು ಮುಚ್ಚುವುದಾಗಿ ಬೆದರಿಕೆ ಪತ್ರ ರವಾನಿಸಿದೆ.
ಅಧಿಕಾರಿಗಳಿಂದ ಮಾಸಿಕ ವಸೂಲಿ ವ್ಯವಸ್ಥೆ ಇದೆ ಎಂದು ವ್ಯಾಪಾರಿಗಳು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ತಮ್ಮ ಪತ್ರದಲ್ಲಿ, ಅವರು ಭಾರೀ ಲಂಚವನ್ನು ಸಂಗ್ರಹಿಸಿದ್ದಾರೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪವನ್ನೂ ಮಾಡಿದ್ದಾರೆ. ಅಬಕಾರಿ ಸಚಿವರ ಕಚೇರಿ ಬೆಂಗಳೂರಿನ ಸಿಬ್ಬಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಲಂಚ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಚುನಾವಣಾ ಉದ್ದೇಶಕ್ಕಾಗಿ ಹಣ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕೆಲವು ಪ್ರಕರಣಗಳಲ್ಲಿ ಅವರು ಸರ್ಕಾರಿ ಅಧಿಕಾರಿಗಳ ವರ್ಗಾವಣೆ ತಪ್ಪಿಸಿದ್ದಾರೆ. ಅಬಕಾರಿ ಹಗರಣದಲ್ಲಿ ಸಚಿವರ ಪಿಎ, ಪಿಎಸ್‌ಗಳೂ ಇದ್ದಾರೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಆಪಸತ ಸಹಾಯಕರು ಹಾಗೂ ಆಪ್ತ ಕಾರ್ಯದರ್ಶಿಗಳಿಗೂ ನಾವು ಕೈ ಮುಗಿಯಬೇಕು. ಎಲ್ಲರೂ ಒಂದೇ ಕಡೆ ಸೇರಿಕೊಂಡು ಇದನ್ನ ನಡೆಸುತ್ತಿದ್ದಾರೆ. ಈಗಾಗಲೇ ಅಬಕಾರಿ ಇಲಾಖೆ ಭ್ರಷ್ಟಾಚಾರದ ಬಗ್ಗೆ ಅಜಿತ್ ಎಂಬುವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅವರಿಗೆ ದೊಡ್ಡ ಮಟ್ಟದ ನೋವಾಗಿರುವ ಹಿನ್ನೆಲೆಯಲ್ಲಿಯೇ ಬೇಸತ್ತು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆಯುತ್ತಿದ್ದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ವಾರ್ಷಿಕ 500 ಕೋಟಿ ರೂ.ಗಿಂತ ಅಧಿಕ ಹಣವನ್ನು ಲಂಚವಾಗಿ ಕೊಡಲಾಗುತ್ತದೆ. ಅಧಿಕಾರಿಗಳ ವರ್ಗಾವಣೆ, ಅಧಿಕಾರಿಗಳ ಬಡ್ತಿ, ಲೈಸೆನ್ಸ್ ವಿತರಣೆ, ಲೈಸೆನ್ಸ್ ನವೀಕರಣ, ಬಾರ್‌ಗಳಿಂದ ಮಾಸಿಕ ಹಣ ವಸೂಲಿ, ಮದ್ಯ ಸರಬರಾಜು ವೇಳೆ ಹಣಕ್ಕೆ ಬೇಡಿಕೆ ಸೇರಿದಂತೆ ಒಟ್ಟಾರೆ ವಿವಿಧ ಮೂಲಗಳಿಂದ ಹಣವನ್ನು ಸಂಗ್ರಹ ಮಾಡಿ ಸಚಿವರಿಗೆ, ಆಯುಕ್ತಾಲಯಕ್ಕೆ ಹಾಗೂ ಕಾರ್ಯದರ್ಶಿಗಳಿಗೆ ಕೊಡಬೇಕಾಗುತ್ತದೆ ಎಂಬ ಆರೋಪ ಕೇಳಿಬಂದಿದೆ.
ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಸಿಎಂ @siddaramaiah ಅವರನ್ನು ಅಗ್ರಹಿಸುತ್ತೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ x ನಲ್ಲಿ ಪೋಸ್ಟ್ ಮಾಡಿದ್ದಾರೆ.