ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಜನತೆಗೆ ಮತ್ತೊಂದು ಶಾಕ್ ನೀಡಿದೆ. ರಾಜ್ಯದಲ್ಲಿ ‘ವಿದ್ಯುತ್ ದರ’ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್ ಸಿ ಆದೇಶ ಹೊರಡಿಸಿದ್ದು, ಏ.1 ರಿಂದ ಜಾರಿಗೆ ಬರಲಿದೆ.
ಪ್ರತಿ ಯೂನಿಟ್ ಗೆ 36 ಪೈಸೆಯಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ ಎಂಬ ಮಾಹಿತಿ ದೊರೆತಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್ ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ.ಏಪ್ರಿಲ್ 1ರಿಂದಲೇ ಕೆಇಆರ್ ಸಿ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.


