Tuesday, February 3, 2026
Flats for sale
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕಟ್ಟೆಚ್ಚರ, ಹೊಸ ವರ್ಷಾಚರಣೆಗೆ ಬ್ರೇಕ್‌ ಹಾಕುತ್ತಾ ಕೊರೊನಾ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕಟ್ಟೆಚ್ಚರ, ಹೊಸ ವರ್ಷಾಚರಣೆಗೆ ಬ್ರೇಕ್‌ ಹಾಕುತ್ತಾ ಕೊರೊನಾ..?

ಬೆಂಗಳೂರು : ನೆರೆಯ ಕೇರಳ ರಾಜ್ಯದಿಂದ ಕೋವಿಡ್ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕ್ರಿಸ್ ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಹೊಸ ಉಪತಳಿ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈಗಾಗಲೇ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸಭೆ ಕರೆಯಲಾಗಿದೆ.

ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸರ್ಕಾರಕ್ಕೆ ಯಾವ ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದ್ದಾರೆಂಬ ಕುರಿತು ಕುತೂಹಲ ಮೂಡಿದೆ.

ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್’ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ.

ಜನರು ಹೆಚ್ಚಾಗಿ ಸೇರುವ ಎಂ.ಜಿ.ರೋಡ್, ಬಿಗ್ರೇಡ್ ರೋಡ್, ರೆಸಿಡೆನ್ಸಿ ರಸ್ತೆಯಲ್ಲಿ 5 ಮಂದಿ ಡಿಸಿಪಿ, 12 ಎಸಿಪಿ, ೩೦ಕ್ಕೂ ಇನ್ ಸ್ಪೆಕ್ಟರ್ ಒಳಗೊಂಡAತೆ 3 ಸಾವಿರ ಪೊಲೀಸರನ್ನು ಭದ್ರತೆಗೆ ಇರಲಿದ್ದಾರೆ. ಹೊಸ ವರ್ಷಾಚರಣೆ ಸಂಭ್ರಮಿಸಲು ಬರುವ ಜನರನ್ನು ನಿಯಂತ್ರಿಸಲು ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.

ಆಯಕಟ್ಟಿನ ಜಾಗಗಳಲ್ಲಿ ಪಿಕೆಟಿಂಗ್ ಪಾಯಿಂಟ್ , ವುಮೆನ್ ಸೇಫ್ಟಿ ಐಸ್ ಲ್ಯಾಂಡ್ ತೆರೆಯಲಾಗುವುದು. ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಸೂಕ್ತ ಕಣ್ಗಾವಲಿಗಾಗಿ ವಾಚ್ ಟವರ್ ನಿರ್ಮಿಸಲಾಗುವುದು . ಡಿಸೆಂಬರ್ 31 ರಂದು ಬಿಗ್ರೇಡ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬAಧಿಸಲಾಗಿದೆ. ಎಂಜಿ ರೋಡ್‌ನಲ್ಲಿ ಪ್ರವೇಶದ್ವಾರದಲ್ಲಿ ಮೆಟೆಲ್ ಡಿಟೆಕ್ಟರ್ ಉಪಕರಣ ಅಳವಡಿಸಲಾಗುವುದು. ಮಾಸ್ಕ್ ಧರಿಸಿದ್ದರೂ ಪ್ರವೇಶಿಸುವಾಗ ಮುಖ ಚಹರೆ ಪತ್ತೆಗಾಗಿ ಮಾಸ್ಕ್ ತೆಗೆಯಬೇಕು. ಅದೇ ರೀತಿ ಕೋರಮಂಗಲ, ಇಂದಿರಾನಗರ, ವೈಟ್‌ಪೀಲ್ಡ್ ಏರಿಯಾಗಳಲ್ಲಿ 2500 ಪೊಲೀಸರನ್ನು ನಿಯೋಜಿಸಿ ಹೆಚ್ಚುವರಿಯಾಗಿ 20 ಡ್ರೋಣ್ ಕ್ಯಾಮೆರಾ ಕಣ್ಗಾವಲು ಇರಲಿದೆ.

ನಗರದ ವಿವಿಧ ಭಾಗಗಳಲ್ಲಿ ಹೊಸ ವರ್ಷದ ಆಚರಣೆಗೆ ಅನುಮತಿ ಕಡ್ಡಾಯವಾಗಿದ್ದು,ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ಹೇರಲಾಗಿದೆ. ಬಿಎಂಟಿಸಿಯಿAದ ಹೆಚ್ಚುವರಿ ಬಸ್ ಸಂಚಾರ, ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ ಮಾಡಲಿದೆ.

ನಗರದ ಯಾವುದೇ ಸಾರ್ವಕನಿಕ ಹಾಗೂ ಬಹಿರಂಗ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದ್ದು, ಯಾರೂ ಕೂಡ ಹೊಸವರ್ಷ ಸ್ವಾಗತಿಸಲು ರಸ್ತೆಗೆ ಬರುವಂತಿಲ್ಲ. ಜನರು ರಸ್ತೆಗೆ ಬರುವುದನ್ನು ತಡೆಯಲು ಭದ್ರತೆಗಾಗಿ ೧೦ ಸಾವಿರ ಪೊಲೀಸರನ್ನು ಯೋಜಿಸಲು ನಿಯೋಜನೆ ಮಾಡಲಾಗುತ್ತದೆ.

ಇನ್ನೂ, ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1300 ಗಡಿ ದಾಟಿದೆ. ಒಂದು ಕಡೆ ಕೇರಳದಲ್ಲೂ ಪ್ರತಿನಿತ್ಯ ೩೦೦ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಲ್ಲಿಯೇ ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಏನೇನು ಮಾರ್ಗಸೂಚಿ

  • ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಬೇಕು.
  • ಸಾಮಾಜಿಕ ಅಂತರ ಪಾಲನೆ, ಸ್ಯಾನಿಟೈಸರ್ ಬಳಕೆ.
  • ಆಸ್ಪತ್ರೆ ಒಳಗೆ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
  • ಮಾಸ್ಕ್ ಧರಿಸಿಯೇ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಬೇಕು.
  • ಆಸ್ಪತ್ರೆಗಳಲ್ಲಿ, ಜನಸಂದಣಿ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು.
  • ಕ್ರಿಸ್‌ಮಸ್, ಹೊಸ ವರ್ಷಾಚರಣೆ ವೇಳೆ ಗುಂಪುಗೂಡದAತೆ ಎಚ್ಚರ.
  • ಜ್ವರ, ಶೀತ, ಬೇರೆ ರೋಗದಿಂದ ಬಳಲುತ್ತಿರುವವರು ವೈದ್ಯರನ್ನು ಭೇಟಿಯಾಗಬೇಕು.
  • ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಕೋವಿಡ್ ಟೆಸ್ಟ್ಗಳ ಗುರಿ.
  • ಆಸ್ಪತ್ರೆಗಳಲ್ಲಿ ರೋಗ ಲಕ್ಷಣಗಳು ಇರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ.
  • ಸಾರ್ವಜನಿಕರಿಗೆ ಕಡ್ಡಾಯವಾಗಿ ಈಗಿನಿಂದಲೇ ಜಾಗೃತಿ ಮೂಡಿಸಬೇಕು.
  • ಐಎಲ್‌ಐ, ಸ್ಯಾರಿ ಕೇಸ್‌ಗಳಿದರೆ ಕೂಡಲೇ ಕೋವಿಡ್ ಟೆಸ್ಟ್ ಮಾಡಬೇಕು.
RELATED ARTICLES

LEAVE A REPLY

Please enter your comment!
Please enter your name here

Most Popular