Saturday, December 13, 2025
Flats for sale
HomeUncategorizedಬೆಂಗಳೂರು ; ರಾಜ್ಯದಲ್ಲಿ ಮೈಕೊರೆಯುವ ಚಳಿಗೆ ಜನ ಗಢಗಢ, ಬೆಚ್ಚಗಿರಲು,ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಹವಾಮಾನ...

ಬೆಂಗಳೂರು ; ರಾಜ್ಯದಲ್ಲಿ ಮೈಕೊರೆಯುವ ಚಳಿಗೆ ಜನ ಗಢಗಢ, ಬೆಚ್ಚಗಿರಲು,ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಹವಾಮಾನ ಇಲಾಖೆ ಸೂಚನೆ.

ಬೆಂಗಳೂರು ; ಚಳಿಯ ಅಬ್ಬರಕ್ಕೆ ರಾಜ್ಯದಲ್ಲಿ ಜನರು ಕಂಗಾಲಾಗಿದ್ದಾರೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಭಾರಿ ಕುಸಿತದವಾಗಿದ್ದು, ಅದೇ ಸ್ಥಿತಿ ಮುಂದುವರಿಯಲಿದೆ. ಮಧ್ಯ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿಯೂ ಚಳಿ ಹೆಚ್ಚಾಗಲಿದ್ದು, ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು, ಕರ್ನಾಟಕದಾದ್ಯಂತ ತೀವ್ರ ಚಳಿ ಆವರಿಸಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿದಿದೆ. ಮೈಕೊರೆಯುವ ಚಳಿಗೆ ಜನ ತತ್ತರಿಸಿದ್ದು, ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10-12 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ, ಮತ್ತು ಶೀತಗಾಳಿ ಹೆಚ್ಚಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಜನವರಿಯಲ್ಲಿ ಚಳಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ, ಆದ್ದರಿಂದ ಜನರು ಬೆಚ್ಚಗಿರಲು ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸೂಚಿಸಲಾಗಿದೆ.

ಚಳಿಯ ಪ್ರಮುಖ ಲಕ್ಷಣಗಳು:
ತಾಪಮಾನ ಕುಸಿತ: ಬೆಂಗಳೂರು, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಮುಂತಾದ ಕಡೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿದಿದೆ.

ಶೀತಗಾಳಿ ಮತ್ತು ಮಂಜು: ಮೈಕೊರೆಯುವ ಚಳಿ ಮತ್ತು ದಟ್ಟ ಮಂಜು ಕವಿದಿದ್ದು, ಜನ ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ.

ಮುನ್ಸೂಚನೆ: ಡಿಸೆಂಬರ್ ತಿಂಗಳಲ್ಲಿ ಚಳಿ ಹೆಚ್ಚಾಗಿದ್ದು, ಜನವರಿ ತಿಂಗಳಲ್ಲಿ ಇದು ಉತ್ತುಂಗಕ್ಕೇರಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಜನರ ಸ್ಥಿತಿ:
ಕಡಿಮೆ ತಾಪಮಾನದಿಂದಾಗಿ ಜನರು ಬೆಚ್ಚಗಿರಲು ಹೆಣಗಾಡುತ್ತಿದ್ದಾರೆ.
ಬೆಳಿಗ್ಗೆ 8:30ರಾದರೂ ಜನರು ಹೊರಬರಲು ಹಿಂಜರಿಯುತ್ತಿದ್ದಾರೆ.

ಹವಾಮಾನ ಇಲಾಖೆಯ ಸಲಹೆ:
ಮಕ್ಕಳು, ಹಿರಿಯ ನಾಗರಿಕರು ಮತ್ತು ಗರ್ಭಿಣಿಯರು ಹೆಚ್ಚಿನ ಕಾಳಜಿ ವಹಿಸಬೇಕು.
ಬೆಚ್ಚಗಿರಬೇಕು, ಆರೋಗ್ಯಕರ ಆಹಾರ ಸೇವಿಸಬೇಕು ಮತ್ತು ಅಗತ್ಯವಿಲ್ಲದಿದ್ದರೆ ತಂಪಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು.

ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ನಾಳೆ ಭಾರಿ ಚಳಿ ಇರಲಿದ್ದು ಅರೆಂಜ್​​ ಅಲರ್ಟ್​​ ಇರಲಿದೆ. ಕೊಪ್ಪಳ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಚಳಿ ಹೆಚ್ಚಿರಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.

ಬಾಗಲಕೋಟೆ 11.1 ಡಿಗ್ರಿ ಸೆಲ್ಸಿಯಸ್​​, ಬಳ್ಳಾರಿ 13.4 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 10.4 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 11.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 12.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 14.2 ಡಿಗ್ರಿ ಸೆಲ್ಸಿಯಸ್, ಬೀದರ್ 9.3​​ ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 13.2 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ 11.9 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು 13.2 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 12.8 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 18.7 ಡಿಗ್ರಿ ಸೆಲ್ಸಿಯಸ್, ದಾವಣಗೆರೆ 13.1 ಡಿಗ್ರಿ ಸೆಲ್ಸಿಯಸ್, ಧಾರವಾಡ 12.2 ಡಿಗ್ರಿ ಸೆಲ್ಸಿಯಸ್, ಗದಗ 11.4 ಡಿಗ್ರಿ ಸೆಲ್ಸಿಯಸ್, ಹಾಸನ 12.2 ಡಿಗ್ರಿ ಸೆಲ್ಸಿಯಸ್, ಹಾವೇರಿ 12.9 ಡಿಗ್ರಿ ಸೆಲ್ಸಿಯಸ್, ಕಲಬುರಗಿ 9.8 ಡಿಗ್ರಿ ಸೆಲ್ಸಿಯಸ್, ಕೊಡಗು 18.9 ಡಿಗ್ರಿ ಸೆಲ್ಸಿಯಸ್, ಕೋಲಾರ 12.6 ಡಿಗ್ರಿ ಸೆಲ್ಸಿಯಸ್, ಕೊಪ್ಪಳ 11.9 ಡಿಗ್ರಿ ಸೆಲ್ಸಿಯಸ್, ಮಂಡ್ಯ 12.5 ಡಿಗ್ರಿ ಸೆಲ್ಸಿಯಸ್, ಮೈಸೂರು 13.8 ಡಿಗ್ರಿ ಸೆಲ್ಸಿಯಸ್, ರಾಯಚೂರು 12.3 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ 13.5 ಡಿಗ್ರಿ ಸೆಲ್ಸಿಯಸ್, ತುಮಕೂರು 12.4 ಡಿಗ್ರಿ ಸೆಲ್ಸಿಯಸ್, ಉಡುಪಿ 19.7 ಡಿಗ್ರಿ ಸೆಲ್ಸಿಯಸ್, ಉತ್ತರ ಕನ್ನಡ 14.6 ಡಿಗ್ರಿ ಸೆಲ್ಸಿಯಸ್, ವಿಜಯಪುರ 11.9 ಡಿಗ್ರಿ ಸೆಲ್ಸಿಯಸ್, ವಿಜಯನಗರ 11.2 ಡಿಗ್ರಿ ಸೆಲ್ಸಿಯಸ್ ಮತ್ತು ಯಾದಗಿರಿಯಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ನಿನ್ನೆ ಬೆಳಿಗ್ಗೆ 8.30ರಿಂದ ಇಂದು ಬೆಳಿಗ್ಗೆ 8.30ರ ಅವಧಿಯಲ್ಲಿ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular