ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ನೀಡಿರುವ ಜಾಮೀನು ರದ್ದು ಕೋರಿ ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ನಟ ದರ್ಶನ್ ಮತ್ತವರ ಗ್ಯಾಂಗ್‌ನಿAದ ನಡೆದಿದ್ದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಮತ್ತಿತರರ ಪರ ವಾದ ಮಂಡನೆ
ಮುಕ್ತಾಯವಾಗಿದ್ದು, ವಾದ, ಪ್ರತಿವಾದ ಆಲಿಸಿ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿ ಲಿಖಿತ ವಾದಾಂಶಗಳನ್ನು ಒAದು ವಾರದೊಳಗೆ 3 ಪುಟಗಳಲ್ಲಿ
ಸಲ್ಲಿಸಬೇಕು ಎಂದು ಸೂಚನೆ ನೀಡಿದೆ. ಇದರಿಂದಾಗಿ ದರ್ಶನ್ ಮತ್ತು ಗ್ಯಾಂಗ್‌ಗೆ 1೦ ದಿನಗಳ ಕಾಲ ತಾತ್ಕಾಲಿಕ ರಿಲೀಫ್ ದೊರೆತಿದೆ. ಕನಿಷ್ಟ 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನಿಗೆ ಸಂಬAಧಿಸಿ ತೀರ್ಪು ಬರಲಿದೆ.
ಸುಪ್ರೀಂಕೋರ್ಟ್ಲ್ ಕಳೆದ ವಾರ ನಡೆದ ವಿಚಾರಣೆ ವೇಳೆ, ನಮಗೆ ಪೊಲೀಸರು ನೀಡಿರುವ ಸಾಕ್ಷ್ಯ ಗಳು ತೃಪ್ತಿ ತಂದಿವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಜತೆಗೆ ಹೈಕೋರ್ಟ್ ಜಾಮೀನು ನೀಡಲು ನೀಡಿರುವ ಕಾರಣಗಳು ಸಮಂಜಸವಾಗಿಲ್ಲ. ಹೈಕೋರ್ಟ್ ತನ್ನ ವಿವೇಚನೆ ಸೂಕ್ತವಾಗಿ ಬಳಸಿಲ್ಲ ಎಂದು ಸುಪ್ರೀA ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ಹೈಕೋರ್ಟ್ ನೀಡಿರುವ ಜಾಮೀನಿನ ವಿಷಯದಲ್ಲಿ ನಾವು ಏಕೆ ಮಧ್ಯಪ್ರವೇಶ ಮಾಡಬಾರದೆಂದು ಹೇಳಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು.
ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು
ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ಈ ಮೂಲಕ ನಟ ದರ್ಶನ್ ಹಾಗೂ ಉಳಿದವರಿಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅತೃಪ್ತಿ, ಅಸಮಾಧಾನ ವ್ಯಕ್ತಪಡಿಸಿತ್ತು.
ಸರ್ಕಾರಿ ವಕೀಲ ಅನಿಲ್ ನಿಶಾನಿ ಅವರು, ನಾವು ಸುಪ್ರೀಂ ಕೋರ್ಟ್ಗೆ ಕೊಟ್ಟಿರುವ ದಾಖಲೆಯನ್ನು ಕೋರ್ಟ್ ಪರಿಶೀಲನೆ ಮಾಡಿದೆ. ದರ್ಶನ್ ಅವರ ಇತರೆ ಅಪರಾಧಗಳ ಬಗ್ಗೆಯೂದಾಖಲೆ ನೀಡಿದ್ದೇವೆ. ಜತೆಗೆ ಜೈಲಿನಲ್ಲಿ ಮಾಡಿರುವ ಬೇರೆ ಚಟುವಟಿಕೆಗಳ ಬಗ್ಗೆಯೂ ದಾಖಲೆ ಕೊಟ್ಟಿದ್ದೇವೆ. ಹೈಕೋರ್ಟ್ ಬೇಲ್ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಹೇಳಿದ್ದರು.