Friday, November 22, 2024
Flats for sale
Homeರಾಜಕೀಯಬೆಂಗಳೂರು : ರೈತರ ಪಹಣಿಯಲ್ಲಿ ವಕ್ಫ್ ಹೆಸರು : ರಾಜ್ಯದಲ್ಲಿ ಶಾಂತಿ ಕದಡುವ ಮೊದಲು ರೈತರಿಗೆ...

ಬೆಂಗಳೂರು : ರೈತರ ಪಹಣಿಯಲ್ಲಿ ವಕ್ಫ್ ಹೆಸರು : ರಾಜ್ಯದಲ್ಲಿ ಶಾಂತಿ ಕದಡುವ ಮೊದಲು ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ..!

ಬೆಂಗಳೂರು : ಬಡ ರೈತರ ಭೂಮಿಯನ್ನು ಸರಕಾರ ಅತಿಕ್ರಮಿಸಿ ವಕ್ಫ್ ಹೆಸರಲ್ಲಿ ವರ್ಗಾಹಿಸಿತ್ತು ಈ ಬಗ್ಗೆ ಕರ್ನಾಟಕದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶಿಸಿದ್ದು ಕಂದಾಯ ಇಲಾಖೆ ಸಚಿವ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಜೊತೆಗೆ, ರೈತರಿಗೆ ನೀಡಿರುವ ವಕ್ಫ್ ನೋಟಿಸ್​ಗಳನ್ನು ತಕ್ಷಣವೇ ಹಿಂಪಡೆಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇನ್ನೇನು ಬಿಜೆಪಿ ಜೆಡಿಎಸ್ ಜೊತೆ ಸೇರಿ ರಾಜ್ಯಾದ್ಯಂತ ಪ್ರತಿಭಟನೆಗೆ ತಯಾರಿ ನಡೆಸಿದ್ದು ಈ ಬಗ್ಗೆ ಹೆಚ್ಚೆತ್ತ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಮಾಹಿತಿ ದೊರೆತಿದೆ.ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರೈತರು ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಹಾಗೂ ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಹೇಳಿದ್ದಾರೆ. ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚಿಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆಗಿದ್ದಾರೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular