ಬೆಂಗಳೂರು : ದಟ್ಟವಾದ ಕಾಡುಗಳನ್ನು ಸರಕಾರದ ಪ್ರಭಾವ ಬಳಸಿ ಅಕ್ರಮವಾಗಿ ಕಡಿದು ಗಣಿಗಾರಿಗೆ ರೆಸಾರ್ಟ್ ನಡೆಸುವವರ ವಿರುದ್ಧ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಬೇಕು. ಒಂದು ತಿಂಗಳ ಒಳಗಡೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.
ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಅತಿಹೆಚ್ಚು ಮಳೆಯಾಗಿರುವುದರಿಂದ ಅಲ್ಲಲಿ ಗುಡ್ಡ ಕುಸಿದು ಹಲವು ಸಾವುನೋವು ಸಂಭವಿಸಿದೆ.ಇದರಿಂದ ಹೆಚ್ಚೆತ್ತ ಸರಕಾರ ಕೊನೆಗೂ ಈ ನಿರ್ಧಾರಕ್ಕೆ ಬಂದಿದೆ. ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ. ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ತಮ್ಮ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
ಇನ್ನೂ ಟೆಕ್ಕಿಗಳು ಯಾವಾಗಲು ಮಜಾಉಡಾಯಿಸಿ ವೀಕ್ ಎಂಡ್ ಅಂತ ನೆಪದಲ್ಲಿ ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಿದ್ದು ಚಾರಣಕ್ಕೂ ಕಡಿವಾಣ ಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


