Friday, November 22, 2024
Flats for sale
Homeರಾಜ್ಯಬೆಂಗಳೂರು ; ವಾಹನ ಸವಾರರೆ ಎಚ್ಚರ ; ಇನ್ನೂ ಮುಂದೆ ಆತಿವೇಗವಾಗಿ ವಾಹನ ಚಲಾಯಿಸಿದರೆ,6 ತಿಂಗಳು...

ಬೆಂಗಳೂರು ; ವಾಹನ ಸವಾರರೆ ಎಚ್ಚರ ; ಇನ್ನೂ ಮುಂದೆ ಆತಿವೇಗವಾಗಿ ವಾಹನ ಚಲಾಯಿಸಿದರೆ,6 ತಿಂಗಳು ಜೈಲು, 2000 ರೂ.ದಂಡ..!

ಬೆಂಗಳೂರು ; ರಾಜ್ಯದಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೂ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಪೋಲಿಸ್ ಇಲಾಖೆ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಾಬಂದಿದೆ.

ರಾಜ್ಯದಲ್ಲಿ ಅತಿ ವೇಗದ ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದ್ದು ಆಗಸ್ಟ್ 1ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಹಾಗೂ ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಅಪಘಾತದಿಂದ ಮೃತಪಟ್ಟ ಸಂಖ್ಯೆ ಕ್ಯಾನ್ಸರ್ ಖಾಯಿಲೆಯಿಂದ ಮೃತಮಟ್ಟವರಿಗಿಂತ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ‌. ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಪ್ರತಿವರ್ಷ ಹೆಚ್ಚುತ್ತಲೇ ಇದ್ದು ಇದಕ್ಕೆ ಕಡಿವಾಣ ಹಾಕಲು ಇಲಾಖೆ ಎರಡು ಸಾವಿರ ರೂಪಾಯಿವರೆಗೆ ದಂಡ ಅಥವಾ ಆರು ತಿಂಗಳು ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular