Friday, November 22, 2024
Flats for sale
Homeರಾಜಕೀಯಬೆಂಗಳೂರು : ವಿಧಾನ ಪರಿಷತ್‌ ವಿಪಕ್ಷ ನಾಯಕನನಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ.

ಬೆಂಗಳೂರು : ವಿಧಾನ ಪರಿಷತ್‌ ವಿಪಕ್ಷ ನಾಯಕನನಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ.

ಬೆಂಗಳೂರು : ಎಂಎಲ್‌ಸಿ ಸಿ.ಟಿ ರವಿ, ಎನ್. ರವಿಕುಮಾರ್ ಅವರು ವಿಪಕ್ಷ ನಾಯಕನ ರೇಸ್‌ನಲ್ಲಿ ಇದ್ದಿದ್ದು ಆದರೆ ಛಲವಾದಿ ನಾರಾಯಣಸ್ವಾಮಿ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಕೊನೆಗೂ ಬಿಜೆಪಿ, ವಿಧಾನಪರಿಷತ್ ವಿರೋಧ ಪಕ್ಷ ನಾಯಕನ್ನು ನೇಮಕ ಮಾಡಿದೆ. ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿದ್ದು, ಇದೀಗ ಪರಿಷತ್ ವಿಪಕ್ಷ ನಾಯಕನನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಇದರಿಂದ ಸಿಟಿ ರವಿ, ಎನ್​ ರವಿ ಕುಮಾರ್​ಗೆ ಹಿನ್ನಡೆಯಾಗಿದೆ.

ಛಲವಾದಿ ನಾರಾಯಣಸ್ವಾಮಿಗೆ ವಿಧಾನ ಪರಿಷತ್‌ ವಿಪಕ್ಷ ನಾಯಕನ ಪಟ್ಟ ಒಲಿದು ಬಂದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಅಧಿಕೃತವಾಗಿ ಪ್ರಕಟ ಮಾಡಿದ್ದಾರೆ. ಚಿಕ್ಕಮಗಳೂರಿನಿಂದ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಟಿ.ರವಿ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿತ್ತು. ಆದರೆ ಇಲ್ಲಿಯವರೆಗೆ, ಪಕ್ಷವು ವಿಪಕ್ಷ ನಾಯಕನ ಸ್ಥಾನವನ್ನು ಅಧಿಕೃತಗೊಳಿಸಿಲ್ಲ. ಇದೀಗ ಮುಂಗಾರು ಅಧಿವೇಶನ ನಡೆಯುತ್ತಿರುವ ಮಧ್ಯ ಬಿಜೆಪಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದೆ. ಇನ್ನು ವಿಪಕ್ಷ ನಾಯಕನ ಹುದ್ದೆ ರೇಸ್​ನಲ್ಲಿದ್ದ ಸಿಟಿ ರವಿ ಮತ್ತು ರವಿ ಕುಮಾರ್ ಅವರಿಗೆ ನಿರಾಸೆಯಾಗಿದೆ.

ಹಿಂದುತ್ವ ಫೈರ್ ಬ್ಯಾಂಡ್ ಎಂದೇ ಗುರುತಿಸಲ್ಪಟ್ಟಿರುವ ಸಿಟಿ ರವಿ ಹಾಗೂ ಎನ್‌ ರವಿಕುಮಾರ್ ನಡುವೆ ಈ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಆದ್ರೆ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪರಿಶಿಷ್ಟ ಸಮುದಾಯಕ್ಕೆ ಸೇರಿದವರು. ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿರಂತರ ಹೋರಾಟ ಮಾಡಿಕೊಂಡು ಬಂದವರು. ಸಾರ್ವಜನಿಕವಾಗಿ, ಬಹಿರಂಗ ವೇದಿಕೆಯಲ್ಲಿ ಸಿದ್ದರಾಮಯ್ಯ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಸಾಕಷ್ಟು ಸುದ್ದಿಯಾದವರು ಛಲವಾದಿ ನಾರಾಯಣಸ್ವಾಮಿ. ಸದ್ಯ ಸಿಎಂ ಸಿದ್ದರಾಮಯ್ಯ ಸರ್ಕಾರ ವಾಲ್ಮೀಕಿ, ಮುಡಾ ಹಗರಣದ ಆರೋಪಗಳ ಸುಳಿಗೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವನ್ನು ಕಟ್ಟಿ ಹಾಕಲು, ವಿರೋಧ ಪಕ್ಷದ ಹೋರಾಟ ತೀವ್ರಗೊಳಿಸಲು ಬಿಜೆಪಿ ಹೈಕಮಾಂಡ್ ಛಲವಾದಿ ನಾರಾಯಣಸ್ವಾಮಿ ಅವರಿಗೆ ಮಣೆ ಹಾಕಿದೆ.ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular