ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಸೋಮವಾರ ಸಂಜೆ ಮುಕ್ತಾಯಗೊಂಡಿದೆ. ಈ ಪ್ರಕ್ರಿಯೆಯಲ್ಲಿ ಹಾಲಿ ಮತದಾರರ ಪಟ್ಟಿಯಲ್ಲಿದ್ದ ಬರೋಬ್ಬರಿ 1.08 ಕೋಟಿ (ಶೇ.19.54) ಮತದಾರರ ಹೆಸರುಗಳು ಕೈಬಿಡುವ ಸಾಧ್ಯತೆ ಇದೆ.
ಜೂ.30ರಿಂದ ಆ.17ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿದ್ದರು. ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ತೆಯಾಗದವರು ಹಾಗೂ ಅಗತ್ಯ ಮಾಹಿತಿಯನ್ನು ಸಲ್ಲಿಸದ ಮತದಾರರ ವಿವರಗಳನ್ನು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗಿದೆ.
ರಾಜ್ಯದಲ್ಲಿ SIRಗೂ ಮುನ್ನ 5.54 ಕೋಟಿ ಮತದಾರರು ಇದ್ದರು. ಮೊದಲ ಹಂತದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಆಗುವ ನಿರೀಕ್ಷೆಯಿದೆ.
ಮುಂದಿನ ಹಂತಗಳು
ಆ.24: ಕರಡು ಮತದಾರರ ಪಟ್ಟಿ ಪ್ರಕಟ
ಅ.27: ಅಂತಿಮ ಮತದಾರರ ಪಟ್ಟಿ ಪ್ರಕಟ
SIRಗೂ ಮುನ್ನ ಮತದಾರರು: 5.54 ಕೋಟಿ.
ಕೈಬಿಡುವ ಸಾಧ್ಯತೆಯಿರುವ ಹೆಸರುಗಳು : 1.08 ಕೋಟಿ.ಶೇಕಡಾವಾರು: 19.54% ಕರಡು ಪಟ್ಟಿ ಪ್ರಕಟವಾದ ಬಳಿಕ ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಬಹುದಾಗಿದೆ. ಹೆಸರು ಕೈಬಿಟ್ಟಿದ್ದರೆ ನಿಗದಿತ ಅವಧಿಯಲ್ಲಿ ಆಕ್ಷೇಪಣೆ ಅಥವಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ.

