Friday, March 14, 2025
Flats for sale
Homeರಾಜ್ಯಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಕೈ ಕಟ್ಟಿಹಾಕಲು ರಾಜ್ಯ ಸರ್ಕಾರ ನಿರ್ಧಾರ,ನಿಗಾಕ್ಕೆ...

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಕೈ ಕಟ್ಟಿಹಾಕಲು ರಾಜ್ಯ ಸರ್ಕಾರ ನಿರ್ಧಾರ,ನಿಗಾಕ್ಕೆ ಎಲ್ಲಾ ಠಾಣೆಗಳಲ್ಲಿ ಪ್ರತ್ಯೇಕ ಘಟಕ..!

ಬೆಂಗಳೂರು : ಮನಸ್ಸಿಗೆ ಬಂದದ್ದನ್ನೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಕೈ ಕಟ್ಟಿಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲೂ ನಿಗಾ ಡೆಸ್ಕ್ಗಳನ್ನು ಸ್ಥಾಪಿಸಲಾಗಿದೆ.

ಈ ಬಗ್ಗೆ ವಿಧಾನಪರಿಷತ್ ಕಲಾಪದ ವೇಳೆ ಮಾಹಿತಿ ನೀಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಾಮಾಜಿಕ ಜಾಲ ತಾಣಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಪತ್ತೆ ಮಾಡಲು ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲೂ ನಿಗಾ ಡೆಸ್ಕ್ ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ನವೀನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಹೆಚ್ಚು ಒತ್ತು ನೀಡಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲೂ ಸಾಮಾಜಿಕ ಜಾಲತಾಣ ನಿಗಾ ಘಟಕ ಸ್ಥಾಪಿಸಲಾಗಿದೆ ಎಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರು ಹೇಳಿದ್ದಾರೆ.

ಸೈಬರ್ ಅಪರಾಧಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಿ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಜಿಪಿ) ಹುದ್ದೆಯನ್ನು ಪ್ರತ್ಯೇಕವಾಗಿ ಸೃಜಿಸಲಾಗಿದೆ. ಡಿಜಿ ಅವರ ಕೆಳಗೆ ಎಡಿಜಿಪಿ, ಐಜಿಪಿ ಹಾಗೂ 7 ಜನ ಎಸ್‌ಪಿಗಳು ಸೇರಿದಂತೆ, ಇತರೆ ಪೊಲೀಸ್ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಾರೆ. ಸೈಬರ್ ಅಪರಾಧಗಳ ಬಗ್ಗೆ ದೂರುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ವಹಿಸಲಾಗುತ್ತಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತ್ಯ ಕ್ರಮ ಕೈಗೊಂಡು ಸಾರ್ವಜನಿಕರ ನೆಮ್ಮದಿಯನ್ನು ಕಾಪಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಎಕ್ಸ್ (ಟ್ವೀಟರ್), ಇನ್‌ಸ್ಟಾಗ್ರಾಮ್‌, ಯೂಟ್ಯೂಬ್ ಚಾನೆಲ್‍ಗಳ ಮೇಲೆ ನಿಗಾವಹಿಸಲು ರಾಜ್ಯಾದ್ಯಂತ ಪ್ರತ್ಯೇಕ ಸಾಮಾಜಿಕ ಜಾಲತಾಣ ನಿಗಾ ಘಟಕಗಳನ್ನು ಜಿಲ್ಲಾ ಮಟ್ಟದಲ್ಲಿ ಹಾಗೂ ಪ್ರತಿ ಪೊಲೀಸ್ ಠಾಣೆಗಳಲ್ಲೂ ಪ್ರಾರಂಭಿಸಿ ಸೂಕ್ತ ತರಬೇತಿ ಪಡೆದ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಹೇಳಿದ್ದಾರೆ.

ಸ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಯೂಟ್ಯೂಬ್‌ಗಳಲ್ಲಿ ಪ್ರಸಾರವಾಗುವ ಪ್ರಚೋದನಕಾರಿ ಸಂದೇಶಗಳ/ ಸುಳ್ಳು ಸುದ್ದಿಗಳ/ ದ್ವೇಷ ಭಾಷಣಗಳ ಮೇಲೆ ಸಮಾಜದ ಸಾಮರಸ್ಯ ಹಾಳು ಮಾಡುವಂತವರ ಮೇಲೆ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ. ಸುಳ್ಳು ಸುದ್ದಿಗಳ ಬಗ್ಗೆ ಕೆಎಸ್‌ಪಿ ಫ್ಯಾಕ್ಟ್‌ಚೆಕ್‌ ಆ್ಯಪ್ ಮೂಲಕ ಫ್ಯಾಕ್ಟ್‌ಚೆಕ್‌ ಮಾಡಿಸಿ ನೈಜ ಮಾಹಿತಿಯನ್ನು ಇಲಾಖೆಯ ಅಧಿಕೃತ ಜಾಲತಾಣದ ಮೂಲಕ ಹಂಚಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ನಿಗಾವಣೆಯಲ್ಲಿ ಕಂಡುಬರುವ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ಪೋಸ್ಟ್‌ಗಳನ್ನು ಕೂಡಲೇ ಅಧಿಕಾರಿಗಳ ಹಾಗೂ ರಾಜ್ಯ ಸಾಮಾಜಿಕ ಜಾಲತಾಣ ನಿಗಾ ಘಟಕದ ಗಮನಕ್ಕೆ ತರಲಾಗುತ್ತದೆ. ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಪೊಲೀಸ್ ಇಲಾಖೆಯು ಯಾವುದೇ ಹೆಚ್ಚುವರಿ ಹಣವನ್ನು ಭರಿಸುತ್ತಿಲ್ಲ ಹಾಗೂ ನಿರ್ವಹಣೆಯನ್ನು ಖಾಸಗಿಯವರಿಗೂ ಸಹ ವಹಿಸಿರುವುದಿಲ್ಲ ಎಂಬ ಮಾಹಿತಿಯನ್ನು ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular