Thursday, May 28, 2026
Flats for sale
Homeರಾಜಕೀಯಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ?.ಉಪಾಹಾರ ಸಭೆಯಲ್ಲಿ ಸಚಿವರಿಗೆ ಮಾಹಿತಿ, ಇಂದು ರಾಜಭವನಕ್ಕೆ ಭೇಟಿ...

ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ?.ಉಪಾಹಾರ ಸಭೆಯಲ್ಲಿ ಸಚಿವರಿಗೆ ಮಾಹಿತಿ, ಇಂದು ರಾಜಭವನಕ್ಕೆ ಭೇಟಿ ಸಾಧ್ಯ…!

ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ನಡೆದ ಸಚಿವರ ಉಪಾಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ ಬಳಿಕ ತಮ್ಮ ನಿರ್ಧಾರವನ್ನು ತಿಳಿಸಿದ್ದು, ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆ ಇದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲು ಈಗಾಗಲೇ ಸಮಯ ಕೋರಲಾಗಿದೆ ಎಂದು ವರದಿಯಾಗಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಉಪಾಹಾರ ಸಭೆಯ ವೇಳೆ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದ ದೃಶ್ಯವೂ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಆದಾಗ್ಯೂ, ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಅಧಿಕೃತವಾಗಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದು ಹೇಳಿದ್ದು, ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ಪಕ್ಷದ ಅಧಿಕೃತ ಘೋಷಣೆಯತ್ತ ಎಲ್ಲರ ಗಮನ ನೆಟ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ತಾರಕ್ಕೇರಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular