Wednesday, March 11, 2026
Flats for sale
Homeರಾಜಕೀಯಬೆಂಗಳೂರು : ಸುಮಲತಾ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ,ಬೆಂಬಲಿಸುವಂತೆ ಮನವಿ..!

ಬೆಂಗಳೂರು : ಸುಮಲತಾ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ,ಬೆಂಬಲಿಸುವಂತೆ ಮನವಿ..!

ಬೆಂಗಳೂರು : ರಾಜಕೀಯದಲ್ಲಿ ವೈರಿಯಾದವರು ಒಂದಾಗುವುದರಲ್ಲಿ ಯಾವುದೇ ಸಮಸ್ಯೆ ಇಲ್ಲವೆಂಬುದು ನಿಜವಾದ ವಿಚಾರ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಹೇಗಾದ್ರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್​​ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ 25 ಕ್ಷೇತ್ರಗಳಲ್ಲಿ ಕಂಟೆಸ್ಟ್​ ಮಾಡುತ್ತಿದ್ದು,ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ.

ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸಿದ್ದರು. ಈ ವೇಳೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್‌ನ ಬದ್ಧ ವೈರಿಯಾಗಿದ್ದು, ಕೊನೆಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿಸಿದ ಸುಮಲತಾ ಅವರನ್ನು ಮಂಡ್ಯ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಬಲಿಸುವಂತೆ ಮನವಿ ಮಾಡಲು ಮುಂದಾಗಿದ್ದಾರೆ.

ತನ್ನ ಬೆಂಬಲಿಗರೊಂದಿಗೆ ಸುಮಲತಾ ಅಂಬರೀಶ್​ ಮನೆಗೆ ಭೇಟಿ ನೀಡಿರೋ ಹೆಚ್​​ಡಿಕೆ, ಬೆಂಬಲ ಕೋರಲಿದ್ದಾರೆ. ಇಬ್ಬರು ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಯಾವುದೇ ಕಾರಣಕ್ಕೂ ನನ್ನ ವಿರುದ್ಧ ಚುನಾವಣೆಗೆ ನಿಲ್ಲಬೇಡಿ ಎಂದು ಕೇಳಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬದ್ಧ ವೈರಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿಯಾಗಿ ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆಯ ಮೂಲಕ ನೀವು ನಮಗೆ ಬೆಂಬಲಿಸಬೇಕು ಎಂದು ಕೇಳಲು ಸುಮಲತಾ ಮನೆಗೆ ತೆರಳಿದ್ದಾರೆ.ನಾನು ಏ.3ರೊಳಗೆ ತನ್ನ ತೀರ್ಮಾನವನ್ನು ಮಂಡ್ಯಕ್ಕೆ ಬಂದು ತಿಳಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ, ಈ ಬಾರಿಯೂ ಸುಮಲತಾ ತಮ್ಮ ಎದುರಾಳಿ ಆಗಬಾರದು ಎಂಬ ನಿಟ್ಟಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರ ಮನೆಗೆ ಬಂದು ಭೇಟಿ ಮಾಡಿದ್ದಾರೆ.

ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌ ಹಾಗೂ ರಾಕ್‌ಲೈನ್‌ ವೆಂಕಟೇಶ್‌ ಸಮ್ಮುಖದಲ್ಲಿ ಎಚ್.ಡಿ. ಕುಮಾರಸ್ವಾಮಿ ಎದುರು ಸುಮಾರು 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ನೀವು ಯಾವುದೇ ಕಾರಣಕ್ಕೂ ಈ ಬಾರಿ ಸ್ಪರ್ಧೆ ಮಾಡಬೇಡಿ. ಮಂಡ್ಯದಲ್ಲಿ ನನ್ನನ್ನು ಬೆಂಬಲಿಸಿ, ನಿಮ್ಮ ಪುತ್ರನ ರಾಜಕೀಯ ಭವಿಷ್ಯವನ್ನು ನನಗೆ ಬಿಡಿ. ನಾನು ಸಹ ಅಭಿಷೇಕ್‌ ಬೆಳವಣಿಗೆಗೆ ಬೆಂಬಲವನ್ನು ಕೊಡುತ್ತೇನೆ. ಮುಂದಿನ ದಿನಗಳಲ್ಲಿ ಅಭಿಷೇಕ್‌ ಅವರು ಮಂಡ್ಯದಲ್ಲಿ ರಾಜಕಾರಣ ಮಾಡಬೇಕಿದೆ. ಅದಕ್ಕೆಲ್ಲ ತಮ್ಮ ಸಹಕಾರ ಇದ್ದೇ ಇದೆ ಎಂದು ಎಚ್‌ಡಿಕೆ ಮನವೊಲಿಕೆ ಮಾಡಲು ಪ್ರಯತ್ನಪಟ್ಟಿದ್ದಾರೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular