Saturday, October 3, 2026
Homeರಾಜ್ಯಬೆಂಗಳೂರು : ₹86 ರೂಪಾಯಿಯ ಔಷಧ ₹4,528ಕ್ಕೆ,ಖಾಸಗಿ ಆಸ್ಪತ್ರೆಗಳಲ್ಲಿ ಔಷಧ ದರದ ಅಜಗಜಾಂತರ ವ್ಯತ್ಯಾಸ ಬಯಲು..!

ಬೆಂಗಳೂರು : ₹86 ರೂಪಾಯಿಯ ಔಷಧ ₹4,528ಕ್ಕೆ,ಖಾಸಗಿ ಆಸ್ಪತ್ರೆಗಳಲ್ಲಿ ಔಷಧ ದರದ ಅಜಗಜಾಂತರ ವ್ಯತ್ಯಾಸ ಬಯಲು..!

ಬೆಂಗಳೂರು : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಸೇರಿದಂತೆ ವಿವಿಧ ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಗಳು ಹಾಗೂ ವೈದ್ಯಕೀಯ ಉಪಕರಣಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.

ಆಹಾರ ಸುರಕ್ಷತೆ ಹಾಗೂ ಔಷಧ ಆಡಳಿತ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಈ ವ್ಯತ್ಯಾಸ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಔಷಧಗಳು ಶೇ.5000ರಷ್ಟು ದುಬಾರಿ ದರದಲ್ಲಿ ಮಾರಾಟವಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

ಆಸ್ಪತ್ರೆಗಳು ಹಾಗೂ ಫಾರ್ಮಸಿಗಳು ಪ್ರತಿಯೊಂದು ಔಷಧದ ಲ್ಯಾಂಡಿಂಗ್ ದರ ಮತ್ತು ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗಪಡಿಸಬೇಕು. ಔಷಧಗಳ ದರ ನಿಯಂತ್ರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಸೀಮಿತವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಖಾದರ್ ತಿಳಿಸಿದರು.

ಲ್ಯಾಂಡಿಂಗ್ ದರ–ಮಾರಾಟ ದರದ ವ್ಯತ್ಯಾಸ : ಖಾದರ್‌ ಹೇಳಿಕೆಯಲ್ಲಿ ಪ್ರಮುಖ ಬೇಡಿಕೆ: ಔಷಧಗಳ ಖರೀದಿ ಬೆಲೆ ಮತ್ತು ಗ್ರಾಹಕರಿಗೆ ವಿಧಿಸುವ ಮಾರಾಟ ದರದಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು.

RELATED ARTICLES

LEAVE A REPLY

Please enter your comment!
Please enter your name here

Most Popular