ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಪಿಲೇಶ್ವರ ಮಂದಿರದಲ್ಲಿ ಶಿವನ ಮೂರ್ತಿಗೆ ಪಂಚಾಮೃತ ಅಭೀಷೇಕವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಮಾಡಿದರು.
ಬೆಳಗಾವಿಯಲ್ಲಿ ನಡೆಯುವ ಗಾಂಧಿ ಭಾರತ ಕಾರ್ಯಕ್ರಮ ಯಾವ ಅಡಚನೆ ಇಲ್ಲದೆ ನಡೆಯಲಿ ಎಂದು ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ ಕರ್ ರವರು ಆದಷ್ಟು ಬೇಗ ಗುಣಮುಖಲಾಗಲೆಂದು ಈ ಪಂಚಾಮೃತ ಅಭಿಷೇಕ ಎಂದು ತಿಳಿದುಬಂದಿದೆ.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಪಿಲೇಶ್ವರನ ಮುಂದೆ ಕುಳಿತು ಪೂಜೆ ಸಲ್ಲಿಸುತ್ತಿದ್ದು ಅವರ ಜೊತೆ ಸ್ಥಳೀಯ ನಾಯಕರು ಸಾಥ್ ನೀಡಿದ್ದಾರೆ.