ಬೆಳಗಾವಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಾಂಗ್ರೆಸ್ ಸರ್ಕಾರ ಜನರ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಮಂತ್ರಿ ನರೇAದ್ರಮೋದಿ, ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.
ಬೆಳಗಾವಿಯಲ್ಲಿಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಚಿಕ್ಕೋಡಿಯಲ್ಲಿ ಜೈನ ಮುನಿ ಹತ್ಯೆ, ಬೆಳಗಾವಿಯಲ್ಲಿ ನಡೆದ ಮಹಿಳೆ ಮೇಲಿನ ದೌರ್ಜನ್ಯ, ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ, ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್‌ಸ್ಫೋಟ ಪ್ರಕರಣ ಎಲ್ಲವನ್ನೂ ಪ್ರಸ್ತಾಪಿಸಿ ದೇಶದಲ್ಲಿ ಈ ಘಟನೆಗಳು ಆತಂಕ ಮೂಡಿಸಿದೆ.
ಕಾಂಗ್ರೆಸ್ ಸರ್ಕಾರವು ತುಷ್ಠೀಕರಣದ ಕಡೆ ಗಮನ ಕೊಡುತ್ತಿದೆಯೇ ಹೊರತು ನೇಹಾಳ ಬಗ್ಗೆ ಕಾಂಗ್ರೆಸ್‌ಗೆ ಕಳಕಳಿ ಇಲ್ಲ ಎಂದು ಟೀಕಿಸಿದರು. ಬೆಂಗಳೂರಿನಲ್ಲಿ ಬಾಂಬ್‌ಸ್ಫೋಟ ಸAಭವಿಸಿದೆ. ಇಡೀ ರಾಜ್ಯದಲ್ಲೇ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಾಂಗ್ರೆಸ್ ಪಕ್ಷವು ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಲಿ ಎಂದು ಪ್ರಧಾನಿಗಳು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷ ಮತಕ್ಕಾಗಿ ದೇಶ ವಿರೋಧಿ ಶಕ್ತಿಗಳ ಜತೆ ಕೈ ಜೋಡಿಸಿದೆ. ಪಿಎಫ್‌ಐನಂತಹ ಸಂಘಟನೆಗಳ ಜತೆ ಹೊಂದಾಣಿಕೆ ಮಾಡಿಕೊಂಡಿದ್ದ ಪಕ್ಷ ಕಾಂಗ್ರೆಸ್, ಆದರೆ ಬಿಜೆಪಿ ಪಿಎಫ್‌ಐನ್ನು ನಿಷೇಧಿಸಿದ ಪಕ್ಷ ಎಂದರು.
ಬಿಜೆಪಿ ದೇಶ ಮತ್ತು ಬಿಜೆಪಿ ಸರ್ಕಾರ ದೇಶ ಮತ್ತು ಸಮಾಜ ವಿರೋಧಿ ಶಕ್ತಿಗಳಿಗೆ ಸಿಂಹ ಸ್ವಪ್ನವಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ತುಷ್ಠೀಕರಣ ಮಾಡುತ್ತಿದೆ. ಆ ಪಾಪ ಕಾಂಗ್ರೆಸ್ ಪಕ್ಷವನ್ನು ಕಾಡದೇ ಬಿಡಲಾರದು ಎಂದು ಹೇಳಿದ್ಧಾರೆ.