ಬೆಳಗಾವಿ ; ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಮಂಗಳವಾರ ಪತ್ನಿಯ ಮೇಲೆ ಅನುಮಾನಗೊಂಡ ವ್ಯಕ್ತಿಯೊಬ್ಬರು ಪತ್ನಿ ಹಾಗೂ ಮತ್ತೊಬ್ಬ ವ್ಯಕ್ತಿಯ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಮೃತರನ್ನು ರೇಣುಕಾ ಮಾಳಗಿ (42) ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಮಲ್ಲಿಕಾರ್ಜುನ ಜಗದಾರ (40) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆರೋಪಿ ಯಲ್ಲಪ್ಪ ಮಾಳಗಿ ತನ್ನ ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಎಂದು ತಿಳಿದುಬಂದಿದೆ.
ಗ್ರಾಮದಲ್ಲಿ ರೇಣುಕಾ ಮತ್ತು ಜಗದರ್ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾನೆ. ಜಗದರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ರೇಣುಕಾ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅಂಕಲಗಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


