ಬೆಳಗಾವಿ : ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವನಪ್ಪಿದ ಘಟನೆ ನಡೆದಿದೆ .ಪ್ರವಾಸಕ್ಕೆಂದು ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಇದರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ.
ಮೃತರನ್ನು ಪವನಕುಮಾರ್ ತಹಶಿಲ್ದಾರ, ಪೂಜಾ, ವಿಜಯಾ, ಆದಿಶೇಷ ಎಂದು ತಿಳಿದಿದೆ.ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ನಿವಾಸಿಗಳು.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಪ್ರಹ್ಲಾದ್ ಜೋಶಿ ಜೊತೆ ಮೃತದೇಹವನ್ನು ಭಾರತಕ್ಕೆ ತರಲು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತುಕತೆ ನಡೆಸಿದ್ದಾರೆಂದು ಮಾಹಿತಿ ದೊರೆತಿದೆ.