ಬೆಳಗಾವಿ : ದೈಹಿಕ ಸಂಪರ್ಕಕ್ಕೆ ತಾನು ಒಪ್ಪಿಲ್ಲವೆಂಬ ಕಾರಣಕ್ಕೆ ಮಗಳ ಮೇಲೆ ಬಲತ್ಕಾರ ಮಾಡಲು ಯತ್ನಿಸಿದ ಪತಿಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ.
ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ ನನ್ನು ಕೊಲೆ ಮಾಡಿ, ಮೃತ ದೇಹವನ್ನು ಎರಡು ತುಂಡಾಗಿ ಕತ್ತರಿಸಿ ಪಕ್ಕದ ಗದ್ದೆಯಲ್ಲಿ ಎಸೆದಿದ್ದ ಆತನ ಪತ್ನಿ ಸಾವಿತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀಮಂತ ಇಟ್ನಾಳೆಯನ್ನು ಕೊಲೆ ಮಾಡಿದ ನಂತರ,ಶವವನ್ನು ಮನೆಯಲ್ಲಿ ಇಟ್ಟುಕೊಂಡರೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳಬಹುದು ಎಂಬ ಹೆದರಿಕೆ ಸಾವಿತ್ರಿಗೆ ಎದುರಾಗಿದೆ.
ಶವವನ್ನು ಸಾಗಿಸುವುದು ಕಷ್ಟ ಎಂದು ಅರಿತ ಆಕೆ ಎರಡು ತುಂಡು ಮಾಡಿದ್ದಾಳೆ. ನಂತರ ಚಿಕ್ಕ ಬ್ಯಾರೆಲ್ನಲ್ಲಿ ಹಾಕಿ ಸಾಗಾಟ ಮಾಡಿ ಪಕ್ಕದ ಗದ್ದೆಯಲ್ಲಿ ಎಸೆದು ಬಂದಿದ್ದಾಳೆ. ರಕ್ತ ಬಿದ್ದ ಜಾಗವನ್ನು ಸ್ವಚ್ಛಗೊಳಿಸಿ, ಸ್ನಾನ ಮಾಡಿ ಮೈ ಮೇಲಿನ ಬಟ್ಟೆಯನ್ನೆಲ್ಲ ಸುಟ್ಟು ಹಾಕಿ ಬೂದಿಯನ್ನು ತಿಪ್ಪೆಗೆ ಎಸೆದಿದ್ದಾಳೆ. ಕೊಲೆ ಮಾಡಲು ಬಳಸಿದ್ದ ಕಲ್ಲನ್ನು ತೊಳೆದು ತಗಡಿನ ಶೆಡ್ಡಿನಲ್ಲಿ ಬಚ್ಚಿಟ್ಟಿದ್ದಾಳೆ. ಪತಿಯ ಮೊಬೈಲ್ ನ್ನು ಸ್ವಿಚ್ ಆಫ್ ಮಾಡಿ ಇಟ್ಟಿದ್ದಾಳೆ. ಕೃತ್ಯದ ವೇಳೆ ಎಚ್ಚರಗೊಂಡಿದ್ದ ಮೊದಲ ಮಗಳಿಗೆ, ನಡೆದ ವಿಚಾರವನ್ನು ಯಾರ ಬಳಿಯೂ ಹೇಳದಂತೆ ತಾಕೀತು ಮಾಡಿದ್ದಾಳೆ. ರಾತ್ರಿ ಬೆಳಗಾಗುವಷ್ಟರಲ್ಲಿ ಕೊಲೆಯ ಸುಳಿವೇ ಸಿಗದಂತೆ ಮಾಡಿದ್ದಾಳೆ.
ಜಮೀನಿನಲ್ಲಿ ಶವ ಕಂಡ ಸ್ಥಳೀಯರು ಚಿಕ್ಕೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ, ಅವರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ ನಡೆದಿರುವ ಘಟನೆ ಒಂದೊAದಾಗಿ ಬೆಳಕಿಗೆ ಬಂದಿದೆ. ಚಿಕ್ಕೋಡಿ ಪೊಲೀಸರಿಗೆ ಇಟ್ನಾಳೆ ಪತ್ನಿಯ ಮೇಲೆ ಅನುಮಾನ ಬಂದಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ, ಸತ್ಯ ಬಾಯಿಬಿಟ್ಟ ಸಾವಿತ್ರಿ,ಪತಿಯಿಂದ ನಿರಂತರವಾಗಿ ಆಗುತ್ತಿದ್ದ ಕಿರುಕುಳ, ಶೋಷಣೆಗೆ ಬೇಸತ್ತು ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾಳೆ. ಪತಿ ಯಾವಾಗಲೂ ತನ್ನೊಂದಿಗೆ ಜಗಳವಾಡುತ್ತಿದ್ದ. ಕುಡಿಯಲು ಹಣಕೊಡಬೇಕು, ಬೈಕ್ ಕೊಡಿಸಬೇಕೆಂದು ಕಿರುಕುಳ ನೀಡುತ್ತಿದ್ದ. ಅಲ್ಲದೆ, ಹಣಕ್ಕಾಗಿ ಬೇರೆಯವರ ಜೊತೆ ಮಲಗು ಎಂದು ಒತ್ತಾಯಿಸುತ್ತಿದ್ದ. ಇದೇ ಕಾರಣದಿಂದ ಪರ ಪುರುಷರ ಜೊತೆಗೆ ಸಂಬAಧವನ್ನು ಇಟ್ಟುಕೊAಡಿರುವುದಾಗಿ ಸಾವಿತ್ರಿ ಪೊಲೀಸರ ಬಳಿ ತಿಳಿಸಿದ್ದಾಳೆ.
ಪತಿಯು ಮಗಳನ್ನೂ ಬಿಡದೆ ಬಲಾತ್ಕಾರ ಯತ್ನಿಸಿದ್ದರಿಂದ ಸಹಿಸಲಾಗದೆ ಕೃತ್ಯ ಎಸಗಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾಳೆ. ಮಕ್ಕಳು ಅನಾಥರಾಗಲಿದ್ದು,ನನ್ನನ್ನು ಬಿಟ್ಟುಬಿಡಿ ಆರೋಪಿಯು ಗೋಗರೆದಿದ್ದಾಳೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ.