Wednesday, August 5, 2026
Homeರಾಜ್ಯಬೆಳಗಾವಿ : ಲಕ್ಷ್ಮೀ ಹೆಬ್ಬಾಳಕರ್ ಪರ ಪಂಜಿನ ಮೆರವಣಿಗೆ ; ಸಚಿವ ಸ್ಥಾನಕ್ಕೆ ಆಗ್ರಹ.

ಬೆಳಗಾವಿ : ಲಕ್ಷ್ಮೀ ಹೆಬ್ಬಾಳಕರ್ ಪರ ಪಂಜಿನ ಮೆರವಣಿಗೆ ; ಸಚಿವ ಸ್ಥಾನಕ್ಕೆ ಆಗ್ರಹ.

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪಂಜಿನ ಮೆರವಣಿಗೆ ನಡೆಸಿದರು.

ಕಾಂಗ್ರೆಸ್ ಮುಖಂಡ ಅಡಿವೇಶ ಇಟಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಬಸವೇಶ್ವರ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಸಾಗಿತು. ಈ ವೇಳೆ “ಕೊಡಲೇಬೇಕು… ಕೊಡಲೇಬೇಕು… ಮಂತ್ರಿ ಸ್ಥಾನ ಕೊಡಲೇಬೇಕು” ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ರಾಜ್ಯದ ಪ್ರಭಾವಿ ಮಹಿಳಾ ನಾಯಕಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದಾಗ ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ತಡೆದರು. ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟರು.
ಸಚಿವ ಸ್ಥಾನ ನೀಡದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular