ಬೆಳಗಾವಿ : ಇದೊಂದು ವಿಶೇಷ ವರದಿ ಯಾಗಿರಬಹುದು ಏಕೆಂದರೆ ಪತಿಯೇ ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ತನ್ನ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಮತ್ತೊಂದು ಮದುವೆಯಾಗಲು ಹೆಂಡತಿಯಿಂದ ವಿಚ್ಛೇದನ ಪಡೆಯಲು ಈ ರೀತಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಬೆಳಗಾವಿ ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು. ಇದಕ್ಕಾಗಿಯೇ ವಿಚ್ಛೇದನ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನು. ಅಲ್ಲದೆ, ಖಾಸಗಿ ಕ್ಷಣದ ವಿಡಿಯೋ, ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು.
ಸಂತ್ರಸ್ತೆಯಿಂದ ವಿಚ್ಛೇದನ ಕೋರಿ ಆರೋಪಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಮಧ್ಯೆ, ಆಕೆಯ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವ ಮೂಲಕ ಆಕೆಗೆ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದನು.
ಸಂತ್ರಸ್ತೆ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಆತನ ಮೊಬೈಲ್ನಲ್ಲಿ ಸಂತ್ರಸ್ತೆಯ ಖಾಸಗಿ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ.
ಆರೋಪಿ ಪತಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ರಾತ್ರಿ ಡಿಸ್ಚಾರ್ಜ್ ಆದ ಬಳಿಕ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.
ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆಪಾದಿತನನ್ನ ಠಾಣೆಗೆ ಕರೆದು ತನಿಖೆ ಮಾಡುವಾಗ ಮೊಬೈಲ್ ಪರಿಶೀಲನೆ ಮಾಡಿದ್ದಾರೆ. ಆತನ ಮೊಬೈಲ್ನಲ್ಲಿ ಮಹಿಳೆ ಹೇಳಿದ ಹಾಗೇ ಕೆಲವು ವಿಡಿಯೋ, ಫೋಟೊಗಳು ಸಿಕ್ಕಿವೆ. ಆ ವಿಚಾರವಾಗಿ ಅರೆಸ್ಟ್ ಮಾಡುವಾಗ ಆರೋಪಿ ತಪ್ಪಿಸಿಕೊಂಡು ಓಡಿ ಹೋಗಿದ್ದ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಆತನನ್ನ ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು ಎಂದರು.
ಆತ ಮಾಡಿದ ತಪ್ಪು ಅವನ ಕಣ್ಣ ಮುಂದೆ ರುಜುವಾತು ಆಯಿತು. ಇದರಿಂದ ಹೆದರಿಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ತಕ್ಷಣ ಪೊಲೀಸರು ಆತನನ್ನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ತನಿಖೆ ಪ್ರಕಾರ ಆತ ಮಾಡಿದ ತಪ್ಪು ರುಜುವಾತು ಆಗಿದ್ದು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಹೆಂಡತಿಗೆ ಆತ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇಲ್ಲವಾದರೆ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಿಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದನು. ಇನ್ನೊಂದು ಮದುವೆ ಮಾಡಿಕೊಳ್ಳಲು ಪ್ಲ್ಯಾನ್ ಮಾಡುತ್ತಿದ್ದ, ಈ ಕಾರಣಕ್ಕೆ ಆತ ಡಿವೋರ್ಸ್ ತೆಗೆದುಕೊಳ್ಳಲು ಮುಂದಾಗಿದ್ದನು ಅಂತಾ ಮಹಿಳೆ ಹೇಳುತ್ತಿದ್ದಾಳೆ. ಸದ್ಯ ಕಿರಣ್ ಮೊಬೈಲ್ ಜಪ್ತಿ ಮಾಡಿ ಎಫ್ಎಸ್ಎಲ್ಗೆ ಕಳುಹಿಸಿದ್ದೇವೆ ಎಂದರು.