Wednesday, December 3, 2025
Flats for sale
Homeಜಿಲ್ಲೆಬೆಳಗಾವಿ : ವಿದ್ಯಾರ್ಥಿನಿ ಮೇಲೆ ದೈಹಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಉಪನ್ಯಾಸಕನ ವಿರುದ್ಧ ಪೋಕ್ಸೋ ಪ್ರಕರಣ.

ಬೆಳಗಾವಿ : ವಿದ್ಯಾರ್ಥಿನಿ ಮೇಲೆ ದೈಹಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಉಪನ್ಯಾಸಕನ ವಿರುದ್ಧ ಪೋಕ್ಸೋ ಪ್ರಕರಣ.

ಬೆಳಗಾವಿ : ವಿದ್ಯಾರ್ಥಿನಿಯರಿಗೆ ಮಾನಸಿಕ ಹಿಂಸೆ ನೀಡುವುದು ಮಾತ್ರವಲ್ಲದೆ ಅವರನ್ನು ಬೆದರಿಸಿ ದೈಹಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಉಪನ್ಯಾಸಕನ ವಿರುದ್ಧ ಕ್ಯಾಂಪ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿರುವ ನಾಗೇಶ್ವರ ಎಂಬವನೇ ಈ ಹೇಯ ಕೃತ್ಯ ಎಸಗಿರುವ ಆರೋಪಿ. ವಿದ್ಯಾರ್ಥಿನಿಯರನ್ನು ಹೆದರಿಸಿ ಬೆದರಿಸಿ ತನ್ನ ಬಾಡಿಗೆ ಮನೆಗೆ ಕರೆಸಿಕೊಳ್ಳುತ್ತಿದ್ದ ಈತ ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಮಾತ್ರವಲ್ಲ; ನಾನು ಕರೆದಾಗಲೆಲ್ಲ ಇಲ್ಲಿಗೆ ಬರಬೇಕು. ಇಲ್ಲವಾದರೆ ಹೆಸರು ಕೆಡಿಸುತ್ತೇನೆ. ಕೊಲೆ ಮಾಡುತ್ತೇನೆ ಎಂದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಕಳೆದ ಎರಡು ವರ್ಷಗಳಿಂದಲೂ ಈತನ ಕ್ರೌರ್ಯಕ್ಕೆ ಗುರಿಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಈ ವಿಚಾರವನ್ನು ಮನೆಯವರಿಗೆ ತಿಳಿಸಿದ್ದಾಳೆ. ಆಕೆಯ ಪೋಷಕರು ಈತನ ವಿರುದ್ಧ ದೂರು ನೀಡಿದ್ದಾರೆ. ಇದೇ ರೀತಿ ಹಲವು ವಿದ್ಯಾರ್ಥಿನಿಯರನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular