ಬೆಳಗಾವಿ : ವಿದ್ಯುತ್ ಕಂಬಕ್ಕೆ ಇನ್ನೊವಾ ಕಾರು ಢಿಕ್ಕಿಹೊಡೆದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಾಣಾಪಾಯದಿಂದ ಚಾಲಕ ಪಾರದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಬಸವ ಮಂಟಪ ಬಳಿ ನಡೆದಿದೆ.
ಇನ್ನೊವಾ ಕಾರ ವಿದ್ಯುತ್ ಕಂಬಕ್ಕೆ ಢಿಕ್ಕಿ ಆಗೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದರಿಂದ ವಿದ್ಯಾ ನಗರದ ಮನೆಗಳಲ್ಲೂ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ.
ಗೋಕಾಕ ನಗರ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದ್ದು ಸ್ಥಳಕ್ಕೆ ಪೋಲಿಸರು ಹಾಗೂ ಹೆಸ್ಕಾಂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.


