ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಡಿಸಿಎಂ ಖಾಸಗಿ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಅಪಘಾತವಾಗಿದ್ದು ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ(30) ಮೃತ ದುರ್ದೈವಿ.
ಸವದತ್ತಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗೋವಾಗ ಘಟನೆ ನಡೆದಿದ್ದು ಡಿಸಿಎಂ ಖಾಸಗಿ ಪಿಎ ರಾಜೇಂದ್ರ ಪ್ರಸಾದ್, ಕಾರು ಚಾಲಕನಿಗೂ ಗಾಯವಾಗಿದ್ದು ಆತನನ್ನು ಧಾರವಾಡ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.
ಸಚಿವೆ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದ ವೇಳೆ ಮಂಜುನಾಥ್ ಗೆ ಕಾರು ಡಿಕ್ಕಿ ಹೊಡೆದಿದ್ದು ಈ ವೇಳೆ ಸವಾರನಿಗೆ ತಲೆ ಭಾಗಕ್ಕೆ ಗಂಭೀರಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ಬಗ್ಗೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


