Friday, March 13, 2026
Flats for sale
Homeಜಿಲ್ಲೆಬೆಳ್ತಂಗಡಿ : ಆಯುಧ ಪೂಜೆ ವೇಳೆ ಹೃದಯಾಘಾತದಿಂದ 29 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಸಾವು ..!

ಬೆಳ್ತಂಗಡಿ : ಆಯುಧ ಪೂಜೆ ವೇಳೆ ಹೃದಯಾಘಾತದಿಂದ 29 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಸಾವು ..!

ಬೆಳ್ತಂಗಡಿ; ಆಯುಧ ಪೂಜೆ ವೇಳೆ 29 ವರ್ಷದ ಹೃದಯಾಘಾತದಿಂದ ಯುವಕ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ. ಆದಿತ್ಯ ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಸಾಗಿಸುವ ಮೊದಲೇ ಮೃತಪಟ್ಟಿದ್ದಾರೆ.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು ಸಂಬಂಧಿಕರನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular