Thursday, August 13, 2026
Homeಜಿಲ್ಲೆಬೆಳ್ತಂಗಡಿ : "ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ, ಧರ್ಮಸ್ಥಳ ಕೇಸ್ ತನಿಖೆ ವೇಳೆ ಅಪಘಾತ, ನಾಲ್ವರಿಗೆ...

ಬೆಳ್ತಂಗಡಿ : “ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ, ಧರ್ಮಸ್ಥಳ ಕೇಸ್ ತನಿಖೆ ವೇಳೆ ಅಪಘಾತ, ನಾಲ್ವರಿಗೆ ಗಾಯ.

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.

ಎಸ್‌ಐಟಿ ಎಸ್ಪಿ C. A. ಸೀಮೋನ್ , ಇನ್ಸ್‌ಪೆಕ್ಟರ್ ಕುಸುಮಧರ್ , ಸಿಬ್ಬಂದಿ P. C. ಮಂಜುನಾಥ್ ಸೇರಿದಂತೆ ಚಾಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರು ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಧಿಕಾರಿಗಳು ಜಿತೇಂದ್ರ ಕುಮಾರ್ ದಯಮಾ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಒಟ್ಟು ನಾಲ್ವರು ಇದ್ದು, ಘಟನೆಯಲ್ಲಿ ಗಾಯಗೊಂಡ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ರಸ್ತೆ ಬದಿಯ ದಿಬ್ಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ವಾಹನಕ್ಕೆ ಹಾನಿಯಾಗಿದೆ. ಈ ಸಂಬಂಧ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular