Thursday, September 18, 2025
Flats for sale
Homeಜಿಲ್ಲೆಬೆಳ್ತಂಗಡಿ ; ಧರ್ಮಸ್ಥಳ ಬಗ್ಗೆ ಅಪಪ್ರಚಾರ : ವಕೀಲರ ಜೊತೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರು…!

ಬೆಳ್ತಂಗಡಿ ; ಧರ್ಮಸ್ಥಳ ಬಗ್ಗೆ ಅಪಪ್ರಚಾರ : ವಕೀಲರ ಜೊತೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರು…!

ಬೆಳ್ತಂಗಡಿ ; ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿತ್ತು ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ ಭೀತಿ ಎದುರಿಸುತ್ತಿದ್ದರು.

ಯಾವಾಗ ಪೊಲೀಸರು ಅರೆಸ್ಟ್​ ಮಾಡಲು ಮುಂದಾದ್ದರೋ ಸಮೀರ್ ಕೂಡಲೇ ಮಂಗಳೂರು ಕೋರ್ಟ್​ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು (ಆಗಸ್ಟ್ 21) ಈ ಅರ್ಜಿ ವಿಚಾರಣೆ ನಡೆಸಿದ ಮಂಗಳೂರು ಕೋರ್ಟ್​, ಸಮೀರ್ ಗೆ ಜಾಮೀನು ನೀಡಿ ಆದೇಶ ಹೊರಡಿಸಿತ್ತು ಇದರೊಂದಿಗೆ ಸಮೀರ್ ಬಂಧನದಿಂದ ಪಾರಾಗಿದ್ದರು.

ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದು ಕಳೆದ ಎರಡು ದಿನಗಳಿಂದ ಬೆಂಗಳೂರು ಬಾಡಿಗೆ ಮನೆ ಹಾಗೂ ಬಳ್ಳಾರಿಯಲ್ಲಿರುವ ಸ್ವಂತ ಮನೆಗೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಅಂಟಿಸಿ ಬಂದಿದ್ದರು.

ಇದೀಗ ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನು ಇದೇ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.ಒಟ್ಟಿನಲ್ಲಿ ಧರ್ಮಸ್ಥಳ ವಿಚಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಒಳಪಟ್ಟಿದ್ದು ಇದೀಗ ದೇವಸ್ಥಾನದ ನಂಬಿಕೆ ವಿಚಾರದಲ್ಲಿ ಭಕ್ತಾದಿಗಳು ಅಕ್ರೊಶ ಹೊರಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular