Friday, March 13, 2026
Flats for sale
Homeಜಿಲ್ಲೆಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲೆಂದು ಅಭಿಮಾನಿಯಿಂದ ಉರುಳುಸೇವೆ.

ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲೆಂದು ಅಭಿಮಾನಿಯಿಂದ ಉರುಳುಸೇವೆ.

ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ್ ಸ್ವಾಮಿ ಸಾನ್ನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ ಅಭಿಮಾನಿಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ದಿಢೀರನೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಬೇಗ ಚೇತರಿಕೆ ಕಂಡು ಮತ್ತೆ ಎಂದಿನಂತೆ ಜನ ಸೇವೆಯಲ್ಲಿ ತೊಡಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ನಂತರ ಶ್ರೀ ಮಂಜುನಾಥ್ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular